ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ

0
0
loading...

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ

ಕನ್ನಡಮ್ಮ ಸುದ್ದಿ- ಗೋಕಾಕ: ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿ ಅವರನ್ನು ಉತ್ತಮ ನಾಗರೀಕರನ್ನಾಗಿ ಮಾಡುವಂತೆ ಡಿವೈಎಸ್‌ಪಿ ಡಿ.ಟಿ.ಪ್ರಭು ಹೇಳಿದರು.
ಅವರು ಶನಿವಾರದಂದು ನಗರದ ಶೂನ್ಯ ಸಂಪಾದನಮಠದ ಚೆನ್ನ ಬಸವೇಶ್ವರ ವಿದ್ಯಾಪೀಠದ ಬಿಸಿಎ ಕಾಲೇಜ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಶ್ರಿÃ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗಿದ್ದು ಶಿಕ್ಷಕರು ಹಾಗೂ ಪಾಲಕರು ಅವರಿಗೆ ಶಿಕ್ಷಣದೊಂದಿಗೆ ಸಾಂಸ್ಕೃತಿಕ,ಧಾರ್ಮಿಕ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವಂತಹ ಕಾರ್ಯ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ಮೊಸರಿನ ಗಡಗಿ ಒಡೆಯುವ ಸ್ಪರ್ಧೆ ಆಯೋಜಿಸಲಾಗಿತ್ತು.
ಸಂಸ್ಥೆಯ ನಿರ್ದೇಶಕಿ ಸುಷ್ಮಾ ಪಾಟೀಲ,ಆಡಳಿತಾಧಿಕಾರಿ ಅಡಿವೇಶ ಗವಿಮಠ, ಎಚ್‌ಓಡಿಗಳಾದ ಶಿರೀನ ಮೋಮಿನ, ಗುರುರಾಜ ಚೌಗಲಾ,ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥೆ ನೀಶಾಲಿ ನಂಬರಗಿ, ಮುಖ್ಯೊÃಪಾಧ್ಯಾಯಿನಿ ವಿಜಯಲಕ್ಷಿö್ಮÃ ಹಿರೇಮಠ ಹಾಗೂ ಶಿಕ್ಷಕ ಸಿಬ್ಬಂದಿ ವರ್ಗದವರು ಇದ್ದರು.

loading...