ಮುಂದುವರಿದ ಸ್ವಚ್ಛತಾ ಅಭಿಯಾನ

0
0
loading...

ಹಳಿಯಾಳ: ತಾಲೂಕಾ ಕೇಂದ್ರದಲ್ಲಿ ಮುಂದುವರಿದ ಮೂರನೇ ದಿನದ ಸ್ವಚ್ಛತಾ ಅಭಿಯಾನದಲ್ಲಿ ಮನೆ-ಮನೆಗೆ ತೆರಳಿ ಸ್ವಚ್ಛತೆ ಕಾಪಾಡಿಕೊಳ್ಳುವ ಹಾಗೂ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಕೋರಲಾಯಿತು.
ತಹಶೀಲ್ದಾರ ವಿದ್ಯಾಧರ ಗುಳಗುಳಿ ಅವರ ಪಾಲ್ಗೊಳ್ಳುವಿಕೆಯಲ್ಲಿ ನಡೆದ ಸ್ವಚ್ಛತಾ ಕಾರ್ಯದ ಸ್ಥಳಕ್ಕೆ ಬಂದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ಸ್ವಚ್ಛತಾ ಕಾರ್ಯವನ್ನು ಪರಿಶೀಲಿಸಿದರು. ಮೂರನೇ ದಿನದಂದು ಎರಡು ಪ್ರತ್ಯೇಕ ತಂಡಗಳಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಬಸ್‍ನಿಲ್ದಾಣ ರಸ್ತೆ, ಕೆ.ಎಚ್.ಬಿ. ಕಾಲನಿ ಹಾಗೂ ಗೌಳಿಗಲ್ಲಿ ಕೆರೆಯ ಮೇಲ್ಗಡೆ ಬೆಳೆದಿದ್ದ ಗಿಡ-ಗಂಟಿಗಳನ್ನು ಕಡಿದು ತೆರವುಗೊಳಿಸಲಾಯಿತು. ಬ್ರೆಜಿತಾ ಬೃಗಾಂಜಾ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಅತಿಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ, ನ್ಯಾಯವಾದಿ ಮಂಜುನಾಥ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳು ಕ್ರೀಯಾಶೀಲರಾಗಿ ಪಾಲ್ಗೊಂಡಿದ್ದರು. ಮಂಗಲಾ ಕಶೀಲಕರ ನೇತೃತ್ವದಲ್ಲಿ ಜೀಜಾಮಾತಾ ಸಂಘಟನೆಯವರು, ವಿಲಾಸ ಕಣಗಲಿ ನೇತೃತ್ವದಲ್ಲಿ ಜಯಕರ್ನಾಟಕ ಸಂಘಟನೆಯವರು, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ನಾಯಕ, ತಾಲೂಕ ಕಚೇರಿ ಹಾಗೂ ಪುರಸಭೆಯ ಸಿಬ್ಬಂದಿಗಳು ಇನ್ನಿತರರು ಪಾಲ್ಗೊಂಡಿದ್ದರು ಎಂದು ಪುರಸಭೆ ಮುಖ್ಯಾಧಿಕಾರಿ ಕೇಶವ ಚೌಗುಲೆ ತಿಳಿಸಿದ್ದಾರೆ.-: ಪ್ಲಾಸ್ಟಿಕ್ ಮಾರಾಟ: ದಂಡ :-
ಪ್ಲಾಸ್ಟಿಕ್ ಮುಕ್ತ ಅಭಿಯಾನದ ಅಂಗವಾಗಿ ಬುಧವಾರ ಹಳಿಯಾಳ ಪಟ್ಟಣದಲ್ಲಿ ಅರಿವು ಜಾಥಾ ನಡೆಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ ವಿದ್ಯಾಧರ ಗುಳಗುಳಿ ನೇತೃತ್ವದಲ್ಲಿ ತಮ್ಮ ಸಿಬ್ಬಂದಿಗಳೊಂದಿಗೆ ಮಾರುಕಟ್ಟೆ ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳಿಗೆ ತೆರಳಿದ ಪುರಸಭೆ ಮುಖ್ಯಾಧಿಕಾರಿ ಕೇಶವ ಚೌಗುಲೆ ನಿಷೇಧಿತ ಪ್ಲಾಸ್ಟಿಕ್ ಕ್ಯಾರಿಬ್ಯಾಗ್‍ಗಳನ್ನು ಬಳಸದಂತೆ ತಿಳಿ ಹೇಳಿದರು. ಈ ಸಂದರ್ಭದಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಹೊಂದಿದ್ದ ಬೇಕರಿ ಮಾಲೀಕರೊಬ್ಬರಿಗೆ 5 ಸಾವಿರ ರೂ., ಇತರ 3 ಅಂಗಡಿಗಳಿಗೆ ತಲಾ 500 ರೂ. ಗಳಂತೆ ದಂಡ ವಿಧಿಸಲಾಯಿತು. ವಿದ್ಯಾರ್ಥಿಗಳು, ಕರವೇ, ಜೀಜಾಮಾತಾ ಮಹಿಳಾ ಸಂಘ ಹಾಗೂ ಶಿಕ್ಷಣ ಇಲಾಖೆಯವರು ಪಾಲ್ಗೊಂಡಿದ್ದರು.

loading...