ಯಲಬುರ್ಗಾ ಪಪಂ ಬಿಜೆಪಿ ಭರ್ಜರಿ ಗೆಲುವು: ಲೋಕಸಭಾ ಚುನಾವಣೆಗೆ ದಿಕ್ಸೂಚಿ

0
0
loading...

ಕನ್ನಡಮ್ಮ ಸುದ್ದಿ-ಯಲಬುರ್ಗಾ: ಸ್ಥಳೀಯ ಸಂಸ್ಥೆಗಳಿಗಳಿಗೆ ನಡೆದ ಚುನಾವಣೆಯಲ್ಲಿ ಯಲಬುರ್ಗಾದ ಪಟ್ಟಣ ಪಂಚಾಯತಿಗೆ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದ, ಮುಂದಿನ ಲೋಕಸಭಾ ಚುನಾವಣೆಗೆ ಹೊಸ ದಿಕ್ಸೂಚಿಯಾಗಲಿದೆ ಎಂದು ಶಾಸಕ ಹಾಲಪ್ಪ ಆಚಾರ್ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಫಲಿತಾಂಶ ನಂತರ ಬಿಜೆಪಿ ಕಚೇರಿಯಲ್ಲಿ ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ವಿಶ್ವವೇ ಭಾರತದತ್ತ ನೋಡುವಂತಹ ಅಭಿವೃದ್ಧಿ ಕಾರ್ಯಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದಾರೆ. ದೇಶಕ್ಕೆ ಸುಭದ್ರ ಮತ್ತು ಜನಪರ ಆಡಳಿತ ನೀಡುವ ಮೂಲಕ ಪ್ರತಿಯೊಬ್ಬರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದು ನೂರು ದಿನಾ ಕಳೆದರು ಇನ್ನೂ ಜನಪರ ಯೋಜನೆಗಳನ್ನು ಜಾರಿಗೆ ತರುವಲ್ಲಿ ಸಂಪೂರ್ಣ ವಿಫಲವಾಗಿದೆ. ತಾಲೂಕಿನಲ್ಲಿ ಮುಂಗಾರು ಮಳೆ ವಿಫಲವಾಗಿದ್ದರಿಂದ ರೈತರು ತೀವ್ರ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಆದರೆ ಸಮ್ಮಿಶ್ರ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ತಾಲೂಕಿನ ಮತ್ತು ಯಲಬುರ್ಗಾ ಪಟ್ಟಣದ ಜನತೆ ಬೇಸತ್ತು ಹೋಗಿದ್ದರಿಂದ ಪಟ್ಟಣದ ಜನತೆ ಬಿಜೆಪಿ ಪಕ್ಷಕ್ಕೆ ಆಶೀರ್ವದಿಸಿದ್ದಾರೆ.ಪಟ್ಟಣದ ಮೂಲ ಸೌಕರ್ಯವನ್ನು ಒದಗಿಸುವಲ್ಲಿ ನೂತನ ಸದಸ್ಯರು ಮತ್ತು ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮುಖಂಡ ಬಸವಲಿಂಗಪ್ಪ ಭೂತೆ, ಸಿಎಚ್.ಪೋಲೀಸ್ ಪಾಟೀಲ್, ಅರವಂದಗೌಡ ಪಾಟೀಲ್, ವೀರಣ್ಣ ಹುಬ್ಬಳ್ಳಿ, ಶಿವನಗೌಡ ಬನಪ್ಪಗೌಡ್ರ, ಎಸ್.ಎನ್.ಶ್ಯಾಗೋಟಿ, ಸುರೇಶಗೌಡ ಶಿವನಗೌಡ, ಕಳಕನಗೌಡ ಜುಮ್ಲಾಪೂರು, ಪ್ರಕಾಶ ಬೇಲೇರಿ ಸೇರಿದಂತೆ ಬಿಜೆಪಿ ಮುಖಂಡರು ಇದ್ದರು.

loading...