ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ರೈತ ಬಂಧನ, ಬಿಡುಗಡೆ || 14/09/2018

0
0
loading...

ಬೆಳಗಾವಿ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ರೈತರನ್ನು ಮುಂಜಾಗೃತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ನಡೆಸಿದ ರೈತರು ವಿವಿಧ ಬೇಡಿಕೆಗಳಿಗಾಗಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಸಚಿವ ರಮೇಶ ಜಾರಕಿಹೊಳಿ ರೈತರ ಕಬ್ಬಿನ ಬಾಕಿ ಬಿಲ್ ಕೊಡುತ್ತಿಲ್ಲ ಎಂದು ಆಕ್ರೊÃಶ ವ್ಯಕ್ತಪಡಿಸಿದರು. ಬಹು ದಶಕಗಳ ಬೇಡಿಕೆಯಾದ ಮಹಾದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಗೆ ಆಗ್ರಹಿಸಿದರು. ಶನಿವಾರ ನಗರಕ್ಕೆ ರಾಷ್ಟçಪತಿಗಳು, ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸುತ್ತಿರುವ ಹಿನ್ನಲೆ ಹಾಗೂ ಕಲಂ ೧೪೪ ನಿಷೇದಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ, ಪ್ರತಿಭಟನೆಗೆ ಸೇರುತ್ತಿದ್ದ ರೈತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಲಾಯಿತು. ವಶಕ್ಕೆ ಪಡೆಯುವ ವೇಳೆ ರೈತರು ಪೆÇಲೀಸರ ಕ್ರಮ ಹಾಗೂ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ರೈತರ ಮುಖಂಡರಾದ ಅಶೋಕ ಯಮಕನಮರಡಿ, ಜಯಶ್ರಿÃ, ಸೇರಿದಂತೆ ೫೦ಕ್ಕೂ ಹೆಚ್ಚು ರೈತರು ಪಾಲ್ಗೊಂಡಿದ್ದರು.

loading...