ವಿಶ್ವಕರ್ಮ ಜಯಂತಿ ಉತ್ಸವ ಅರ್ಥಪೂರ್ಣವಾಗಿ ಆಚರಿಸಲು ಸೂಚನೆ

0
0
loading...

ಕನ್ನಡಮ್ಮ ಸುದ್ದಿ-ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಸೆ. 17 ರಂದು ವಿಶ್ವಕರ್ಮ ಜಯಂತಿ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಜಿಲ್ಲೆಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಮಾಜದ ಬಾಂಧವರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಸರ್ಕಾರದ ನಿರ್ದೇಶನದಂತೆ ಜಯಂತಿ ಉತ್ಸವಗಳನ್ನು ಆಚರಿಸಲಾಗುತ್ತಿದೆ. ಈ ಬಾರಿಯೂ ಸಹ ಸೆಪ್ಟೆಂಬರ್ 17 ರಂದು ಬೆಳಗ್ಗೆ 10 ಗಂಟೆಗೆ ವಿಶ್ವಕರ್ಮ ಜಯಂತಿ ಅಂಗವಾಗಿ ಹೊಸ ಯಲ್ಲಾಪೂರದ ಕಸಬಾಗೌಡರ್ ಓಣಿಯ ಶ್ರೀ ಮೌನೇಶ್ವರ ದೇವಸ್ಥಾನದಿಂದ ಮೆರವಣಿಗೆ ಆರಂಭಿಸಲಾಗುವುದು.
ಮೆರವಣಿಗೆಯಲ್ಲಿ ಸಾರೋಟಿನಲ್ಲಿ ಭಾವಚಿತ್ರ ಹಾಗೂ ಮೂರು ಜನಪದ ಕಲಾತಂಡಗಳು ಇರುತ್ತವೆ. ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು. ಸಂಗೀತ, ವಿಶೇಷ ಉಪನ್ಯಾಸಗಳು ನಡೆಯಲಿವೆ ಎಂದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಕೆ. ರಂಗಣ್ಣವರ ಸ್ವಾಗತಿಸಿ, ಸಭೆಯನ್ನು ನಿರ್ವಹಿಸಿದರು. ಸಮಾಜದ ಮುಖಂಡ ವಸಂತ ಅರ್ಕಾಚಾರ್, ಮನೋಹರ ಲಕ್ಕುಂಡಿ, ಎಂವಿ. ಹಡಗಲಿ, ಕಾಳಪ್ಪ ಬಡಿಗೇರ, ವಸಂತ ಕಿಲ್ಲೇದ್, ಕಸ್ತೂರಿ ಬಡಿಗೇರ, ಶಂಕರ ಅರ್ಕಸಾಲಿ, ಸುರೇಶ್ ಬಡಿಗೇರ ಮತ್ತಿತರರಿದ್ದರು.

loading...