ಸೆಪ್ಟಂಬರ್ 3ನೇ ವಾರ ಸಂಪುಟ ವಿಸ್ತರಣೆ

0
0
loading...

ಬೆಂಗಳೂರು:ಹಲವು ಕಾರಣಗಳನ್ನ ನೀಡಿ ಮುಂದೂಡಲಾಗುತ್ತಿದ್ದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಸಂಪುಟದಲ್ಲಿ ಸೇರ್ಪಡೆಗೊಳ್ಳಲು ತುದಿಗಾಲಲ್ಲಿ ನಿಂತಿರುವ ಶಾಸಕರಿಗೆ ದೋಸ್ತಿ ಸರ್ಕಾರ ಸಿಹಿಸುದ್ದಿ ನೀಡಿದೆ.
ಸೆಪ್ಟಂಬರ್ ಮೂರನೇ ವಾರ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಹಿರಿಯರನ್ನ ಸಂಪುಟಕ್ಕೆ ಸೇರ್ಪಡೆ ಬಗ್ಗೆ ಚರ್ಚೆ ನಡೆದಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ತಿಳಿಸಿದ್ದಾರೆ.
ಇನ್ನು ಕಾಂಗ್ರೆಸ್ ನ ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಡ ಹೆಚ್ಚಾಗಿದೆ. ಹಿರಿಯ ಶಾಸಕರಾದ ರಾಮಲಿಂಗರೆಡ್ಡಿ, ಹೆಚ್.ಕೆ ಪಾಟೀಲ್ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಕೈ ಶಾಸಕರು ಒತ್ತಡ ಹಾಕಿದ್ದಾರೆ. ಬಿಬಿಎಂಪಿ ಮೇಯರ್ ಚುನಾವಣೆ ಹಿನ್ನೆಲೆ ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಬೆಂಗಳೂರು ಶಾಸಕರು ಒತ್ತಡ ಹಾಕಿದ್ದಾರೆ
ಈ ಬಗ್ಗೆ ಮಾತನಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ರಾವ್,ಹಿರಿಯರನ್ನ ಸಂಪುಟಕ್ಕೆ ಸೇರ್ಪಡೆಗೊಳ್ಳಲು ಮಾತುಕತೆ ನಡೆದಿದೆ.ಈ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚೆ ನಡೆಸುತ್ತೇವೆ. ಇಂತಹ ಪರಿಸ್ಥಿತಿಯನ್ನ ಎದುರಿಸಿ ಅನುಭವವಿದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಬೆಂಗಳೂರು ನಗರ ಉಸ್ತುವಾರಿ, ಖಾತೆ ಬದಲಾಣೆ ಕುರಿತು ಪ್ರತಿಕ್ರಿಯಿಸಿದ ಅವರು,ಇದು ಊಹಾಪೂಹ, ಸೂಕ್ತ ಸಮಯದಲ್ಲಿ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದಿದ್ದಾರೆ.

loading...