ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಗೋವಾ ಮುಖ್ಯಮಂತ್ರಿ ಪರಿಕ್ಕರ್

0
12
loading...

ನವದೆಹಲಿ :ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಹಲವು ದಿನಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಪರಿಕ್ಕರ್ ಅವರ ಆರೋಗ್ಯ ಪರಿಸ್ಥಿತಿ ಕ್ಷಿಣಿಸಿದ ಹಿನ್ನೆಲೆಯಲ್ಲಿ ಅವರನ್ನು ಇಂದು ಬೆಳಗ್ಗೆ ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಆದರೆ, ಕೆಲ ಸಮಯದ ಬಳಿಕ ಅವರನ್ನು ಡಿಸ್ಚಾರ್ಜ್ ಮಾಡಲು ಆಡಳಿತ ಮಂಡಳಿ ನಿರ್ಧರಿಸಿತು ಎಂದು ಏಮ್ಸ್ ಮೂಲಗಳಿಂದ ತಿಳಿದುಬಂದಿದೆ.
62 ವರ್ಷದ ಪರಿಕ್ಕರ್ ಸೆಪ್ಟೆಂಬರ್ 15 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ವಿಶೇಷ ವಿಮಾನದಲ್ಲಿ ಅವರನ್ನು ಗೋವಾಕ್ಕೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ. ತವರು ರಾಜ್ಯಕ್ಕೆ ತೆರಳಲು ಪರಿಕ್ಕರ್ ಸದೃಢರಾಗಿದ್ದಾರೆ ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ಗೋವಾಕ್ಕೆ ಪರಿಕ್ಕರ್ ವಾಪಾಸ್ ಬಂದ ನಂತರ ಪಣಜಿಯಲ್ಲಿನ ಅವರ ಖಾಸಗಿ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಹೇಳಲಾಗಿದೆ.

loading...