ಜಿಲ್ಲಾಧಿಕಾರಿ ವಿರುದ್ಧ ರೈತರ ಆಕ್ರೋಶ

0
1
loading...

ಜಿಲ್ಲಾಧಿಕಾರಿ ವಿರುದ್ಧ ರೈತರ ಆಕ್ರೋಶ

ಕನ್ನಡಮ್ಮ ಸುದ್ದಿ-ಬೆಳಗಾವಿ:ಜಿಲ್ಲೆಯ ರೈತರ ಕಬ್ಬಿನ ಬಾಕಿ ಬಿಲ್ಲ ನೀಡದ ಕಾರ್ಖಾನೆಗಳ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದ ಭರವಸೆ ಮರೆತ ಜಿಲ್ಲಾಧಿಕಾರಿ ಮತ್ತು ಮುಖ್ಯಮಂತ್ರಿ ಕ್ರಮ ಖಂಡಸಿ ಇಂದು ರೈತ ಸಂಘದ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿ ಜಿಲ್ಲಾಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಸೌಭಾಗ್ಯ ಲಕ್ಷ್ಮಿ ಕಾರ್ಖಾನೆ ಸೇರಿದಂತೆ ಜಿಲ್ಲೆಯ ಹಲವು ಕಾರ್ಖಾನೆಗಳು ರೈತರ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿವೆ .ಈ ಕಾರ್ಖಾನೆಗಳ ಮೇಲೆ ಕ್ರಮ ಕೈಗೊಂಡು ರೈತರಿಗೆ ನ್ಯಾಯವದಗಿಸುವ ಭರವಸೆ ನೀಡಿದ್ದ ಜಿಲ್ಲಾಧಿಕಾರಿಗಳು ರೈತರ ಸಮಸ್ಯೆ ಮರೆತಿದ್ದಾರೆ .ಮತ್ತು ಕಳೆದ ತಿಂಗಳು ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಹತ್ತು ದಿನಗಳಲ್ಲಿ ಕಾರ್ಖಾನೆ ಮಾಲಿಕರ ಸಭೆ ಕರೆದು ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದನ್ನು ಮರೆತು ವಚನ ಭ್ರಷ್ಟರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡೆಸಿದರು .

ಚೂನಪ್ಪ ಪೂಜೇರಿ ಸೇರಿದಂತೆ ಇತರರು ಇದ್ದರು.

loading...