ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

0
0
loading...

ಕನ್ನಡಮ್ಮ ಸುದ್ದಿ-ಗಂಗಾವತಿ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ವಿಶಿಷ್ಟಚೇತನರ ಮತ್ತು ಪಾಲಕರ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಮಂಜುನಾಥ ಹೊಸ್ಕೇರಾ ಆರೋಪಿಸಿದರು.
ಒಕ್ಕೂಟವು ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಬಸವನಬಾಗೇವಾಡಿ ತಾಲೂಕಿನ ಚಿಮ್ಮಲಗಿ ಗ್ರಾಮದಲ್ಲಿ 12 ವರ್ಷದ ಬುದ್ದಿಮಾಂದ್ಯ ಬಾಲಕಿ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆ ತೆಗ್ಗಿಸುವಂತಾಗಿದೆ ಎಂದು ತಿಳಿಸಿದರು. ಈ ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಅಲ್ಲಿನ ಪೊಲೀಸರು ರಾಜಕೀಯ ಒತ್ತಡಕ್ಕೆ ಶರಣಾಗಿದ್ದಾರೆ. ಕೊಲೆಯಾದ ಬಾಲಕಿ ಲಮಾಣಿ ಜನಾಂಗದವಳಾಗಿದ್ದಾಳೆ. ಪ್ರಭಾವಶಾಲಿ ವ್ಯಕ್ತಿ ಈ ಕೃತ್ಯ ಎಸಗಿರುವ ಕಾರಣದಿಂದ ಪೊಲೀಸರು ಕಠಿಣ ಕಾನೂನು ಕ್ರಮ ಜರುಗಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿಸಿದರು. ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಒಕ್ಕೂಟದ ತಾಲೂಕು ಘಟಕದ ಅಧ್ಯಕ್ಷ ಅಶೋಕ ಗುಡಿಕೋಟೆ, ರಾಜ್ಯ ಸಮಿತಿ ಸದಸ್ಯ ಬಸವರಾಜ ಗೋನಾಳ, ಹುಲುಗಪ್ಪ ಕಾಗೇರಿ, ಪುಂಡನಗೌಡ ಪಾಲ್ಗೊಂಡಿದ್ದರು.

loading...