ಹತ್ತು ಸಾವಿರ ರನ್ ಪೂರೈಸಿದ ಕೊಹ್ಲಿ

0
0
loading...

ಟ್ಟಣಂ: ಇಲ್ಲಿ ನಡೆದ ಭಾರತ-ವೆಸ್ಟ್ ಇಂಡೀಸ್ ನಡುವಿನ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ನುಚ್ಚುನೂರು ಮಾಡಿದ್ದಾರೆ.

ವಿರಾಟ್ ಕೊಹ್ಲಿ ಪಂದ್ಯದಲ್ಲಿ 81 ರನ್ ಗಳಿಸುತ್ತಿದ್ದಂತೆ, ಏಕದಿನ ಪಂದ್ಯಗಳಲ್ಲಿ ಅತಿ ವೇಗವಾಗಿ 10 ಸಾವಿರ ರನ್ ಪೂರೈಸಿದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸಚಿನ್ ತೆಂಡೂಲ್ಕರ್ 259 ಇನಿಂಗ್ಸ್ ಗಳಲ್ಲಿ ಹತ್ತು ಸಾವಿರ ರನ್ ಪೂರೈಸಿದ್ದರೆ, ವಿರಾಟ್ ಕೊಹ್ಲಿ ಕೇವಲ 205 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಇಂದು 10000 ರನ್ ಪೂರೈಸುವುದರೊಂದಿಗೆ ಈ ಸಾಧನೆ ಮಾಡಿದ ವಿಶ್ವದ 13 ನೇ ಹಾಗೂ ಭಾರತದ 5ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

loading...