ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ: ಡಿಸಿ ಶೆಟ್ಟೆಣ್ಣವರ

0
0
loading...

ವಿಜಯಪುರ : ಮುಂಬರುವ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಹಾಗೂ ಜಿಲ್ಲೆಯಲ್ಲಿ ಕೆರೆ ತುಂಬಿಸುವ ಯೋಜನೆ ಸಮರ್ಪಕ ಅನುಷ್ಠಾನ ಕುರಿತಂತೆ ವಿವಿಧ ನೀರಾವರಿ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಕೆರೆ ನೀರು ತುಂಬುವ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅಂತರಜಲ ಹೆಚ್ಚಳಕ್ಕೆ ಹಾಗೂ ಕುಡಿಯಲು ಅನುಕೂಲವಾಗುವ ಹಿನ್ನಲೆಯಲ್ಲಿ ಆದ್ಯತೆ ಮೇಲೆ ವಿವಿಧ ಕೆರೆಗಳನ್ನು ತುಂಬಿಸುವ ದಿಸೆಯಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಹಾದೇವ ಮುರಗಿ, ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು, ಹೆಸ್ಕಾಂ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

loading...