ಟಿಪ್ಪು ಜಯಂತಿ‌‌ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

0
58
loading...

ಟಿಪ್ಪು ಜಯಂತಿ‌‌ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

ಕನ್ನಡಮ್ಮ ಸುದ್ದಿ- ಬೆಳಗಾವಿ; ಇದೇ.ನ.10ರಂದು ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ವಿರೋಧಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಯ ಮೂಲಕ ರಾಜ್ಯ ಸರ್ಕಾರ ಮನವಿ ಸಲ್ಲಿಸಿದರು.
ಟಿಪ್ಪು ಸುಲ್ತಾನ ಹಿಂದೂ ವಿರೋಧಿಯಾಗಿದ್ದವರು.ಅವರ ಆಡಳಿತದ ಅವಧಿಯಲ್ಲಿ ಹಿಂದೂ ದೇವಾಲಯಗಳನ್ನು ದ್ವಂಸ ಮಾಡಿ ,ಮುಸ್ಲಿಂ ದೇವಾಲಯ ನಿರ್ಮಿಸಿದವರು. ಹಿಂದೂಗಳನ್ನು ಬಲವಂತವಾಗಿ ಮತಾಂತರ ಮಾಡಿದ್ದಾನೆ.ಹಿಂದೂ ವಿರೋಧಿ ಜಯಂತಿ ಆಚರಣೆಯನ್ನು ರಾಜ್ಯ ಸರ್ಕಾರ ಆಚರಣೆ ಮಾಡುವುದನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ. ಸರ್ಕಾರ ಜಯಂತಿ ಆಚರಣೆ ಕೈ ಬಿಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಸದ ಸುರೇಶ ಅಂಗಡಿ, ಕಿತ್ತೂರ ಶಾಸಕ ಮಹಾಂತೇಶ ದೊಡ್ಡಗೌಡ್ರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜೇಂದ್ರ ಹರಕುಣಿ, ಗ್ರಾಮೀಣ ಅಧ್ಯಕ್ಷ ವಿಶ್ವನಾಥ ಪಾಟೀಲ,      ಮಾಜಿ ಶಾಸಕ   ಸಂಜಯ ಪಾಟೀಲ, ಪ್ರಧಾನ ಕಾರ್ಯದರ್ಶಿ ರಾಜಕುಮಾರ ಟೋಪಣ್ಣನವರ  ,      ಎಂ.ಬಿ ಜಿರ್ಲಿ,  ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

loading...