ಠಾಣೆಯಲ್ಲಿ ಸರ್ಜಾ ವಿಚಾರಣೆ

0
0
loading...

ಬೆಂಗಳೂರು:ನಟಿ ಶ್ರುತಿ ಹರಿಹರನ್‍ಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ನಟ ಅರ್ಜುನ್ ಸರ್ಜಾ ಇಂದು ಕಬ್ಬನ್ ಪಾರ್ಕ್ ಠಾಣೆ ಪೊಲೀಸರ ಎದುರು ವಿಚಾರಣೆಗೆ ಹಾಜರಾದರು.
ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ಶನಿವಾರ ಸರ್ಜಾ ಅವರಿಗೆ ನೋಟಿಸ್ ನೀಡಿದ್ದರು.ನೋಟಿಸ್‍ಗೆ ಪ್ರತಿಕ್ರಿಯೆ ನೀಡಿದ ಸರ್ಜಾ, ಇಂದು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು.
ಆ ಹಿನ್ನೆಲೆಯಲ್ಲಿ ಇಂದು ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದರು.ಅರ್ಜುನ್ ಸರ್ಜಾ ಜೊತೆ ನಟರಾದ ಚಿರಂಜೀವಿ ಸರ್ಜಾ ಹಾಗೂ ಧ್ರುರ್ವ ಸರ್ಜಾ ಸಾಥ್ ನೀಡಿದರು.
ಸುಮಾರು 2 ಗಂಟೆಗೂ ಹೆಚ್ಚು ಕಾಲ ಪೊಲೀಸರು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದರು.ಆದರೆ ಅವರನ್ನು ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಪಡಿಸಲಿಲ್ಲ.
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಸರ್ಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಸರ್ಜಾ ಬಂಧನಕ್ಕೆ ತಡೆಯಾಜ್ಞೆ ನೀಡಿತ್ತು. ಆದರೆ, ತನಿಖೆ ಮುಂದುವರೆಸಬಹುದು ಎಂದು ಪೊಲೀಸರಿಗೆ ನಿರ್ದೆಶನ ನೀಡಿತ್ತು.
ಇದರ ಹಿನ್ನೆಲೆಯಲ್ಲಿ ಇಂದು ಪೊಲೀಸರ ಎದುರು ಸರ್ಜಾ ವಿಚಾರಣೆಗೆ ಹಾಜರಾದರು.

loading...