ದೆಹಲಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ:  ಸರಕು ಸಾಗಣೆ ವಾಹನಗಳ ಪ್ರವೇಶ ನಿಷೇಧ

0
17
loading...

 

ನವದೆಹಲಿ: ದೀಪಾವಳಿ ಬೆನ್ನಲ್ಲೇ ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದೆಹಲಿಗೆ ಸರಕುಸಾಗಣೆ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳವಾರ ಹಾಗೂ ಬುಧವಾರ ಪಟಾಕಿ ಸಿಡಿಸಿದ ಪರಿಣಾಮ ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲೀನ್ಯ ಹೆಚ್ಚಾಗಿದ್ದು, ಹೊಗೆ ಜತೆಗೆ ಮಂಜು ಮಿಶ್ರಣವಾಗಿ ಪರಿಸ್ಥಿತಿ ಹದಗೆಟ್ಟಿದೆ ಎಂದು ಕೇಂದ್ರ ಮಾಲೀನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ಪಟಾಕಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರಕಾರ ಅನೇಕ ಸೂಚನೆಗಳನ್ನು ನೀಡಿದ್ದರೂ ಸಾರ್ವಜನಿಕರು ಇವುಗಳನ್ನು ಗಾಳಿಗೆ ತೂರಿ ಪಟಾಕಿ ಸಿಡಿಸಿದ್ದಾರೆ. ಇದರ ಪರಿಣಾಮ ದೆಹಲಿಯಲ್ಲಿ ಹೊಗೆ ಹಾಗೂ ಮಂಜಿನಲ್ಲಿ ಮುಳುಗಿದೆ. ದೆಹಲಿ ಪರಿಸ್ಥಿತಿ ಹದಗೆಟ್ಟಿದ್ದು, ಉಸಿರಾಟಕ್ಕೆ ಸಂಬಂಧಿಸಿದ ತೊಂದರೆಗಳು ಕಾಣಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪರಿಣಾಮ ಇದೀಗ ಎಚ್ಚೆತ್ತುಕೊಂಡಿರುವ ದೆಹಲಿ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ರಾಜಧಾನಿಗೆ 3ದಿನಗಳ ಕಾಲ ಎಲ್ಲ ಬಗೆಯ ಸರಕು ಸಾಗಾಣಿಕಾ ವಾಹನಗಳ ಪ್ರವೇಶವನ್ನು ನಿಷೇಧಿಸಿದೆ. ತರ್ತು ಆರೋಗ್ಯ ಸೇವೆಗಳು, ಹಾಲು, ನೀರು, ಮೊಟ್ಟೆ, ದವಸ ಧಾನ್ಯಗಳು, ತರಕಾರಿಗಳು ಮುಂತಾದ ಅಗತ್ಯವಸ್ತುಗಳ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

loading...