ಡಾ.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನಾಚರಣೆ

0
0
loading...

ವಿಜಯಪುರ: ಭಾರತದ ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರ 62 ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಇಂದು ಬೆಳಿಗ್ಗೆ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಕೇಂದ್ರ ಕುಡಿಯುವ ನೀರು ಹಾಗೂ ನೈರ್ಮಲ್ಯ ಖಾತೆ ಸಚಿವರಾದ ರಮೇಶ ಜಿಗಜಿಣಗಿ, ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಸೇರಿದಂತೆ ವಿವಿಧ ಗಣ್ಯರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಉಪಮಹಾಪೌರ ಗೋಪಾಲ ಘಟಕಾಂಬಳೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಜಿ.ಎಂ.ದೊಡಮನಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎನ್.ಸಿಂಧೂರ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಅಡಿವೆಪ್ಪ ಸಾಲಗಲ್, ರಮೇಶ ಆಸಂಗಿ, ಶರಣು ಸಬರದ ಸೇರಿದಂತೆ ಇತರರು ಉಪಸ್ಥಿತರಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

loading...