ಯೋಧರ ಕುಟುಂಬದ ರಕ್ಷಣೆಗೆ ಕೈಜೋಡಿಸಿ : ಡಿಸಿ ಶಾಂತಾರಾಮ

0
3
loading...

ಬಾಗಲಕೋಟೆ: ದೇಶವನ್ನು ಕಾಯುವ ಯೋಧರು ರಕ್ಷಣಾ ಕಾರ್ಯಾಚರಣೆಯಲ್ಲಿ ಜೀವತೆತ್ತು ಅಂಗವಿಕಲರಾಗಿದ್ದು, ಅಂತಹ ಕುಟುಂಬಗಳ ರಕ್ಷಣೆಯ ಹೊಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಸಶಸ್ತ್ರ ಧ್ವಜ ದಿನಾಚರಣೆ ಅಂಗವಾಗಿ ಸಾಂಕೇತಿಕ ಹಾಗೂ ವಾಹನ ಧ್ವಜಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ದೇಶದ ಕಾರ್ಯಾಚರಣೆಯಲ್ಲಿ ತಮ್ಮ ಪಾಲಿನ ಸೇವೆ ಸಲ್ಲಿಸಿ ನಿವೃತ್ತರಾಗುವ ಸೈನಿಕರು ಮತ್ತು ಅವರ ಕುಟುಂಬದವರ ಕಲ್ಯಾಣ ಮತ್ತು ಪುನರ್ವಸತಿ ಕಲ್ಪಿಸುವುದು ನಮ್ಮೇಲ್ಲರ ಜವಾಬ್ದಾರಿಯಾಗಿದೆ ಎಂದರು.

ಪ್ರತಿ ವರ್ಷದಂತೆ ಈ ವರ್ಷವೂ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ದೇಶಾದ್ಯಂತ ಆಚರಿಸಲಾಗುತ್ತಿದ್ದು, ಧ್ವಜಾ ದಿನಾಚರಣೆ ಅಂಗವಾಗಿ ಸಾಂಕೇತಿಕ ಹಾಗೂ ವಾಹನ ಧ್ವಜಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಿ ನಿಧಿ ಸಂಗ್ರಹಿಸಲಾಗುತ್ತಿದೆ. ಈ ನಿಧಿಯಿಂದ ಹುತಾತ್ಮ ಯೋಧರ ಕುಟುಂಬಗಳಿಗೆ ಅಂಗವಿಕಲ ಯೋಧರ ಕುಟುಂಬಗಳಿಗೆ ಮತ್ತು ಮಾಜಿ ಯೋಧರಿಗೆ ಪುನರ್ವಸತಿ ಕಲ್ಪಿಸಲಾಗುತ್ತಿದ್ದು, ಇಂತಹ ಪವಿತ್ರ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕೆಂದರು. ಸೈಜಿಕ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಮೇಶ ಜಗಾಪೂರ ಮಾತನಾಡಿ, ಧ್ವಜ ನಿಧಿಗೆ ನೀಡುವ ದೇಣಿಗೆಗಳು ಆದಾಯ ತೆರಿಗೆ ಕಾಯ್ದೆ 1961ರ ಪರಿಚ್ಛೇದನ 80 ಜಿ (5) (6) ರಡಿಯಲ್ಲಿ ತೆರಿಗೆಯಿಂದ ವಿನಾಯಿತಿ ಇದ್ದು, ಸಾಂಕೇತಿಕ ಧ್ವಜ ಒಂದಕ್ಕೆ ಸಾಮಾನ್ಯರಿಂದ ರೂ.10, ವಿದ್ಯಾರ್ಥಿಗಳಿಂದ ರೂ.5 ವಾಹನ ಧ್ವಜ ಒಂದಕ್ಕೆ ದ್ವಿಚಕ್ರ ವಾಹನ ರೂ.20, ಲಘು ಮೋಟಾರ ವಾಹನ ರೂ.50 ಮತ್ತು ಖಾಸಗಿ ಬಸ್ಸು, ಟ್ರಕ್‍ಗಳಿಗೆ ರೂ.100 ರಂತೆ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುಜಾತಾ ಪಾಟೀಲ, ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ, ವಕೀಲರ ಸಂಘದ ಅಧ್ಯಕ್ಷ ಸಿ.ಬಿ.ಪಾಟೀಲ, ವಿಶ್ವ ಮಾನವ ಹಕ್ಕುಗಳ ಸೇವಾ ಸಮಿತಿಯ ಅಧ್ಯಕ್ಷ ಎಸ್.ಬಿ.ಕರಣಿ ಭಾಗವಹಿಸುವರು. ಎಸ್.ಸಿ.ನಂದಿಮಠ ಕಾನೂನು ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ವಿ.ಆರ್.ಶಿರೋಳ ಅತಿಥಿ ಉಪನ್ಯಾಸ ನೀಡಲಿದ್ದಾರೆ.

loading...