ನೀರಿಗೆ ವಿಷ ಬೆರಸಿದ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಕುಮಾರಸ್ವಾಮಿ ಸೂಚನೆ

0
0
loading...

ಬೆಂಗಳೂರು: ಕುಡಿಯುವ ನೀರಿಗೆ ಕೀಟನಾಶಕ ಬೆರೆಸಿದ ಪ್ರಕರಣವನ್ನು ತ್ವರಿತಗತಿಯಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರ (ಕೆ) ಗ್ರಾಮದಲ್ಲಿನ ಕುಡಿವ ನೀರಿನ ಟ್ಯಾಂಕ್​ನಲ್ಲಿ ಕಿಡಿಗೇಡಿಗಳು ಬುಧವಾರ ಕ್ರಿಮಿನಾಶಕ ಬೆರೆಸಿದ್ದರು. ಈ ಟ್ಯಾಂಕ್​ನಿಂದ ತಾಲೂಕಿನ ಶಖಾಪುರ, ತೆಗ್ಗಳ್ಳಿ ಗ್ರಾಮಕ್ಕೆ ನೀರು ಪೂರೈಕೆಯಾಗಿದ್ದು, ನೀರಿನಲ್ಲಿ ಕೆಟ್ಟ ವಾಸನೆ ಬರುತ್ತಿರುವುದನ್ನು ಶಖಾಪುರ ಗ್ರಾಮದ ಪಂಪ್ ಆಪರೇಟರ್ ಮೌನೇಶ್ ಗಮನಿಸಿ ನೀರು ಸೇವಿಸಿದ್ದರು. ಅಲ್ಲದೆ, ಆತನ ತಾಯಿ ನಾಗಮ್ಮ ಕೂಡ ನೀರು ಸೇವಿಸಿ ಅಸ್ವಸ್ಥರಾಗಿದ್ದರು. ಅವರು ಇದೀಗ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೊನ್ನಮ್ಮ ಎಂಬ ಮಹಿಳೆ ಈ ನೀರು ಸೇವಿಸಿ ಮೃತಪಟ್ಟಿದ್ದು, ಇತರೆ ನಾಲ್ಕು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದಲ್ಲಿ ಅಸ್ವಸ್ಥರಾದ ಗ್ರಾಮಸ್ಥರಿಗೆ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವಂತೆಯೂ ಅಧಿಕಾರಿಗಳಿಗೆ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಪ್ರಸ್ತುತ ಜಿಲ್ಲಾಸ್ಪತ್ರೆಯಲ್ಲಿ ಅಸ್ವಸ್ಥರಾಗಿರುವ ಮೂವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ

loading...