ಪೌರಾಡಳಿತ ಸಚಿವರು ಜಿಲ್ಲೆಯ ಪೌರಕಾರ್ಮಿಕರ ಸಮಸ್ಯೆ ಬಗೆ ಹರಿಸಲಿ: ಮುನವಳ್ಳಿ ಒತ್ತಾಯ

0
2
loading...

ಕನ್ನಡಮ್ಮ ಸುದ್ದಿ- ಬೆಳಗಾವಿ: ಪೌರಾಡಳಿತ ಸಚಿವ ಸಿ ಎಸ್ ಶಿವಳ್ಳಿಯವರು ನಗರಕ್ಕೆ ಆಗಮಿಸಿ ಪೌರಕಾರ್ಮಿಕರ ವೇತನ ಸಮಸ್ಯೆಯನ್ನು ಬಗೆ ಹರಿಸಬೇಕೆಂದು ಕೆಪಿಸಿಸಿ ಮಾಜಿ‌ ಸದಸ್ಯ ಶಂಕರ‌ ಮುನವಳ್ಳಿ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಮಹಾನಗರ ಪಾಲಿಕೆಯ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಕಳೆದ ನಾಲ್ಕು ತಿಂಗಳಿಂದ ವೇತನ ನೀಡಿಲ್ಲ. ಇದರಿಂದ ಕುಟುಂಬಗಳು ಆರ್ಥಿಕ ಸಮಸ್ಯೆ ಅನುಭವಿಸುತ್ತಿದ್ದಾರೆ. ಅವರಿಂದಲೇ ನಗರದ ಸ್ವಚ್ಛ ಕಾಪಾಡಲು ಸಾಧ್ಯ. ಆದರೆ ವೇತನ ನೀಡದಿರುವುದಕ್ಕೆ ಕಸ ಸ್ವಚ್ಛಗೊಳಿಸಿದ ಪ್ರತಿಭಟನೆ ನಡೆಸುತ್ತಿದ್ದಾರೆ.ಆದ್ದರಿಂದ ತಕ್ಷಣ ಅಗಮಿಸಿ ಸಮಸ್ಯೆ ಯನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿದರು.  ಅಲ್ಲದೆ ಸ್ಮಾರ್ಟ್ ಸಿಟಿ ಅಧಿಕಾರಿಗಳು,ಆಯಕ್ತರು ಜನಪ್ರತಿನಿಧಿಗಳು ಸೇರಿಕೊಂಡು
ಗುತ್ತಿಗೆ ಹೆಸರಿನ ಆದಾರ ಕಮಿಷನ್ ಹೊಡೆಯುತ್ತಿದ್ದಾರೆ. ಇಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದ್ದರಿಂದ ಮಾನವ ಹಕ್ಕು ಆಯೋಗ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

loading...