ಐದು ವರ್ಷದಲ್ಲಿಯೇ ಸಾಕಷ್ಟು ಅಭಿವೃದ್ಧಿ ಕಾರ್ಯವಾಗಿವೆ: ಅಂಗಡಿ

0
2
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಕಳೆದ ಐದು ವರ್ಷಗಳಲ್ಲಿ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ೭೦ ವರ್ಷಗಳಿಂದ ಆಗದ ಅಭಿವೃದ್ಧಿ ನರೇಂದ್ರ ಮೋದಿ ಐದು ವರ್ಷದಲ್ಲಿ ಮಾಡಿದ್ದಾರೆ ಎಂದು ಸಂಸದ ಸುರೇಶ ಅಂಗಡಿ ಹೇಳಿದರು.
ಅವರು ಇಲ್ಲಿನ ರಾಮ ನಗರದ ಗಣೇಶ ಮಂದಿರದಲ್ಲಿ ಸಂಸದರ ಅನುದಾನದಲ್ಲಿ ನಿರ್ಮಾಣ ಮಾಡಲಾದ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದರು.
ಕಳೆದ ಐದು ವರ್ಷಗಳಲ್ಲಿ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ೭೦ ವರ್ಷಗಳಿಂದ ಆಗದ ಅಭಿವೃದ್ಧಿ ನರೇಂದ್ರ ಮೋದಿ ಐದು ವರ್ಷದಲ್ಲಿ ಮಾಡಿದ್ದಾರೆ. ಬೆಳಗಾವಿ ಲೋಕಸಭೆ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರ ಕಳೆದ ಐದು ವರ್ಷದಲ್ಲಿ ಸಾಕಷ್ಟು ಅನುದಾನ ನೀಡಿದೆ. ಆದ್ದರಿಂದ ರೈಲ್ವೆ ಮೇಲ್ಸೆÃತುವೆ, ಜಿಲ್ಲೆಯಲ್ಲಿ ಅನೇಕ ರಸ್ತೆ ಸುಧಾರಣೆ ಸೇರಿದಂತೆ ಕೋಟ್ಯಂತರ ರೂ. ವೆಚ್ಚದ ಕಾಮಗಾರಿ ನಡೆದಿವೆ ಎಂದರು. ಶಾಸಕ ಅನಿಲ ಬೆನಕೆ ಹಾಗೂ ಗಣೇಶ ಮಂದಿರದ ಕಮೀಟಿ ಸದಸ್ಯರು ಸೇರಿದಂತೆ ಮತ್ತಿತರರು ಇದ್ದರು.

loading...