ನವದೆಹಲಿ:- ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟದ ಸರ್ಕಾರವನ್ನು ಅಸ್ಥಿರಗೊಳಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದೆ.
ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಹಾಗೂ ಪಕ್ಷದ ಸಂವಹನ ವಿಭಾಗದ ಮುಖ್ಯಸ್ಥ ರಣದೀಪ್ ಸಿಂಗ್ ಸುರಜೆವಾಲಾ, ಕರ್ನಾಟದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ಶಾಸಕರಿಗೆ ತಲಾ 10 ಕೋಟಿ ರೂಪಾಯಿ ಆಮಿಷ್ ನೀಡಿ ಅವರನ್ನು ಖರೀದಿಸಲು ಪ್ರಯತ್ನಿಸಿರುವ ಯಡಿಯೂರಪ್ಪನವರ ಧ್ವನಿ ಸುರಳಿ ಬಿಡುಗಡೆಗೊಳಿಸಲಾಗಿದೆ. ವಾಮ ಮಾರ್ಗ ಅನುಸರಿಸಿ ಸರ್ಕಾರವನ್ನು ಅಸ್ಥಿರಗೊಳಿಸಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಹಾಗಾಗಿ ಭ್ರಷ್ಟಾಚಾರವೆಸಗುತ್ತಿರುವ ಯಡಿಯೂರಪ್ಪನವರ ವಿರುದ್ಧ ಮೋದಿ ಕ್ರಮ ಕೈಗೊಳ್ಳಬೇಕು. ಅವರ ಮನೆಯ ಮೇಲೆ ಇಡಿ ಹಾಗೂ ಸಿಬಿಐ ದಾಳಿ ನಡೆಸಿ ಶಾಸಕರನ್ನು ಖರೀದಿಸಲು ಇಷ್ಟೊಂದು ಹಣ ಎಲ್ಲಿಂದ ಬಂತು ಎಂಬುದನ್ನು ಪತ್ತೆ ಹಚ್ಚಬೇಕು. ಒಂದು ವೇಳೆ ಅವರು ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಅವರು ಕಾವಲುಗಾರ ಕಳ್ಳ ಎಂಬುದು ಸಾಬೀತಾಗುತ್ತದೆ ಎಂದು ಹೇಳಿದರು.ಯುಎನ್ಐ ಡಿವಿ ಆರ್ ಕೆ 1215
ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಆಗ್ರಹ
loading...
loading...