ಸಂಸತ್ ಭವನದಲ್ಲಿ ವಾಜಪೇಯಿ ಭಾವಚಿತ್ರ ಅನಾವರಣ

0
3
loading...

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸಂಸತ್ ಭವನದ ಸೆಂಟ್ರಲ್ ಹಾಲ್‍ನಲ್ಲಿಂದು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಅನಾವರಣಗೊಳಿಸಿದರು.

ದೇಶಪ್ರೇಮಿ, ಸ್ವಾತಂತ್ರ್ಯ ಹೋರಾಟಗಾರ ಲಾಲಾ ಲಜಪತ್ ರಾಯ್ ಭಾವಚಿತ್ರದ ಪಕ್ಕದಲ್ಲಿ ವಾಜಪೇಯಿಯವರ ಭಾವಚಿತ್ರ ಇರಿಸಲಾಗಿದೆ. ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಸ್ಪೀಕರ್ ಸುಮಿತ್ರಾ ಮಹಾಜನ್‍, ಸಂಸದೀಯ ವ್ಯವಹಾರಗಳ ಸಚಿವ ನರೇಂದ್ರ ಸಿಂಗ್ ತೋಮರ್, ಪ್ರತಿಪಕ್ಷದ ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಜಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾಜಪೇಯಿ ಅವರ ಪುತ್ರಿ, ಅಳಿಯ, ಮೊಮ್ಮಗಳು ಸೇರಿದಂತೆ ಪರಿವಾರದ ಬಹುತೇಕ ಸದಸ್ಯರೂ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ವಾಜಪೇಯಿ ಭಾವಚಿತ್ರವನ್ನಿಡುವ ಕುರಿತು ಕಳೆದ ಡಿಸೆಂಬರ್ ನಲ್ಲಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ನೇತೃತ್ವದಲ್ಲಿ ನಡೆದ ಸಂಸದೀಯ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿತ್ತು. ವಿವಿಧ ಪಕ್ಷಗಳ 13 ಪಕ್ಷಗಳ ಸದಸ್ಯರು ಸಮಿತಿಯಲ್ಲಿದ್ದರು.

ಅಟಲ್ ಬಿಹಾರಿ ವಾಜಪೇಯಿ ಮೂರು ಬಾರಿ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು ಮತ್ತು ಅವರಿಗೆ 2015 ರಲ್ಲಿ ಭಾರತರತ್ನ ಪ್ರಶಸ್ತಿ ನೀಲಾಯಿತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ವರ್ಷ ಆಗಸ್ಟ್ ನಲ್ಲಿ ತಮ್ಮ 93 ನೇ ವಯಸ್ಸಿನಲ್ಲಿ ನಿಧನರಾದರು.

loading...