300 ಮಿಲಿಯನ್ ಡಾಲರ್ ಭದ್ರತಾ ನೆರವಿಗೆ ಅಮೆರಿಕ ಕತ್ತರಿ

0
12

ವಾಷಿಂಗ್ಟನ್: ನಿರೀಕ್ಷೆಯಂತೆಯೇ ಅಮೆರಿಕ ಅಧ್ಯಕ್ಷ ಟ್ರಂಪ್ ಸರ್ಕಾರ ಪಾಕಿಸ್ತಾನಕ್ಕೆ ನೀಡುತ್ತಿದ್ದ ಸುಮಾರು 300 ಮಿಲಿಯನ್ ಡಾಲರ್ ಮೊತ್ತದ ಭದ್ರತಾ ಆರ್ಥಿಕ ನೆರವಿಗೆ ಕತ್ತರಿ ಹಾಕಿದೆ.

ಈ ಬಗ್ಗೆ ಪೆಂಟಗನ್ ನಲ್ಲಿ ನಡೆದ ಮಹತ್ವದ ರಕ್ಷಣಾ ಇಲಾಖೆಯ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಅಮೆರಿಕದಿಂದ ಪಾಕಿಸ್ತಾನ ಸರ್ಕಾರಕ್ಕೆ ನೀಡಲಾಗುತ್ತಿದ್ದ 300 ಮಿಲಿಯನ್ ಡಾಲರ್ ಮೊತ್ತದ ಆರ್ಥಿಕ ನೆರವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪೆಂಟಗನ್ ವಕ್ತಾರರಾದ ಫಿಲ್ ಸ್ಟೆವಾರ್ಟ್ ಮತ್ತು ಇಡ್ರೀಸ್ ಅವರು, ಉಗ್ರ ನಿಗ್ರಹ ವಿಚಾರದಲ್ಲಿ ಪಾಕಿಸ್ತಾನ ಸರ್ಕಾರದ ಪ್ರಯತ್ನಗಳು ನಿರಾಶಾದಾಯಕವಾಗಿದೆ. ಈ ಬಗ್ಗೆ ಈ ಹಿಂದೆ ಸಾಕಷ್ಟು ಬಾರಿ ಅಮೆರಿಕ ಮನವಿ ಮಾಡಿದ್ದರೂ ಹೇಳಿಕೊಳ್ಳುವಂತಹ ಪ್ರಗತಿಯಾಗಿಲ್ಲ. ಹೀಗಾಗಿ ಟ್ರಂಪ್ ಸರ್ಕಾರ ಅನಿವಾರ್ಯವಾಗಿ ಆರ್ಥಿಕ ಭದ್ರತಾ ನೆರವನ್ನು ರದ್ದುಗೊಳಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಕಳೆದ 17 ವರ್ಷಗಳಿಂದ ನೆರೆಯ ಆಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಕಾರಣವಾಗಿರುವ ಉಗ್ರಗಾಮಿಗಳು ಪಾಕಿಸ್ತಾನದಲ್ಲಿ ನೆರವು ಪಡೆದಿದ್ದಾರೆ. ಅವರಿಗೆ ಪಾಕಿಸ್ತಾನ ಸ್ವರ್ಗವಾಗಿದ್ದು, ಈ ಬಗ್ಗೆ ಶಾಶ್ವತ ಪರಿಹಾರ ಕೈಗೊಳ್ಳುವಂತೆ ಅಮೆರಿಕ ಸರ್ಕಾರ ಮನವಿ ಮಾಡಿತ್ತು. ಆದರೆ ಪಾಕಿಸ್ತಾನದಿಂದ ಪೂರಕ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

loading...