ಆರೋಗ್ಯ ಸುಧಾರಣೆಗಾಗಿ ಸಿಂಗಪುರಕ್ಕೆ ತೆರಳಿದ ಕುಮಾರಸ್ವಾಮಿ

0
6
loading...

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ   ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಕಫ ಹಾಗೂ ಕೆಮ್ಮಿನಿಂದ ಬಳಲುತ್ತಿರುವುದರಿಂದ ಚಿಕಿತ್ಸೆಗಾಗಿ ಸಿಂಗಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಪ್ರಕೃತಿ ಚಿಕಿತ್ಸೆ ಫಲಪ್ರದವಾಗದ ಕಾರಣ ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ತೆರಳಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸತತ ಸಮಾವೇಶಗಳಿಂದ ಅಲರ್ಜಿಗೊಳಗಾಗಿದ್ದು, ಚಿಕಿತ್ಸೆಗಾಗಿ ಸಿಂಗಪುರದ ಮೌಂಟ್ ಎಲಿಜೆಬೆತ್ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
ಕಫ ಹಾಗು ಕೆಮ್ಮಿನಿಂದ ಬಳಲುತ್ತಿರುವ ಕುಮಾರಸ್ವಾಮಿ ತಮ್ಮ ಕುಟುಂಬ ವೈದ್ಯರ ಸಲಹೆ ಮೇರೆಗೆ ಧರ್ಮಸ್ಥಳದ ಶ್ರೀಮಂಜುನಾಥ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಹತ್ತು ದಿನಗಳ ಚಿಕಿತ್ಸೆ ಪಡೆದಿದ್ದರು. ಆದರೂ ಅಲರ್ಜಿ ಹಾಗು ಕಫ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಇಂದು ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಈಗಾಗಲೇ ಹಲವು ಬಾರಿ ಮೌಂಟ್ ಎಲಿಜೆಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಕುಮಾರಸ್ವಾಮಿ ಈಗ ಸಂಪೂರ್ಣ ವೈದ್ಯಕೀಯ ತಪಾಸಣೆಗೊಳಗಾಗಲಿದ್ದಾರೆ ಎಂದು ಕುಮಾರಸ್ವಾಮಿ ಕುಟುಂಬ ಮೂಲಗಳು ತಿಳಿಸಿವೆ.
ಇದೇ ಆಸ್ಪತ್ರೆಯಲ್ಲಿ ಈ ಹಿಂದೆ ಸೂಪರ್ ಸ್ಟಾರ್ ರಜನಿಕಾಂತ್, ಮಾಜಿ ಸಚಿವ ಅಂಬರೀಶ್ ಕೂಡ ಚಿಕಿತ್ಸೆ ಪಡೆದಿದ್ದರು. ಈಗ ಅದೇ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಚಿಕಿತ್ಸೆ ಪಡೆಯಲಿದ್ದಾರೆ.

loading...