ರಾಜಕೀಯ ಪ್ರವೇಶ ಮಾಡ್ತಾರಾ ಉಪ್ಪಿ ದಾದಾ

0
14
loading...

ಬೆಂಗಳೂರು: ನಟರು ರಾಜಕೀಯ ಪ್ರವೇಶ ಮಾಡುತ್ತಿರುವುದು ಇತ್ತೀಚೆಗೆ ಹೆಚ್ಚು ಸದ್ದು ಮಾಡುತ್ತಿದೆ. ಕನ್ನಡದ ರಿಯಲ್‍ಸ್ಟಾರ್ ಉಪೇಂದ್ರ ಕೂಡ ಅದೇ ಹಾದಿ ಹಿಡಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಉಪೇಂದ್ರ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಅಂಗಳಕ್ಕೂ ಇಳಿಯಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಹಾಗೂ ಅಭಿಮಾನಿಗಳು ಈಗಾಗಲೇ ಸಾಕಷ್ಟು ಬಾರಿ ಹೇಳಿದ್ದಾರಾದರೂ ಈ ಬಗ್ಗೆ ಉಪ್ಪಿ ಎಲ್ಲೂ ಅಧಿಕೃತ ಮಾಹಿತಿ ನೀಡಿಲ್ಲ.
ಈಗ ಉಪೇಂದ್ರ ರಾಜಕೀಯ ಪ್ರವೇಶ ಸುದ್ದಿ ದಟ್ಟವಾಗಿದ್ದು, ಈ ಕುರಿತು ನಾಳೆ ಉಪ್ಪಿ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೂ ಉಪೇಂದ್ರ ರಾಜಕೀಯ ಬರುತ್ತಾರೆ ಎಂದು ಹೇಳಲಾಗುತ್ತಿತ್ತಾದರೂ ಈ ಬಗ್ಗೆ ಅವರು ಅಲ್ಲಗಳೆದಿದ್ದರು. ತಮ್ಮ ಚಿತ್ರಗಳಲ್ಲಿ ಸಮಾಜದಲ್ಲಾಗುತ್ತಿರುವ ಭ್ರಷ್ಟಾಚಾರ ಹಾಗೂ ರಾಜಕಾರಣದ ಬಗ್ಗೆ ಯುವ ಜನತೆಯಲ್ಲಿ ಜಾಗೃತಿ ಮೂಡಿಸಿದ್ದರು.
ಉಪ್ಪಿ ಈ ಹಿಂದೆ ಅಣ್ಣಾ ಹಜಾರೆಯವರು ಭ್ರಷ್ಟಾಚಾರದ ಬಗ್ಗೆ ಹೋರಾಟ ಕೈಗೊಂಡಿದ್ದಾಗ ಅವರಿಗೆ ಬೆಂಬಲವನ್ನು ಸೂಚಿಸಿದ್ದ ಉಪೇಂದ್ರ ಅವರು ಆಮ್ ಆದ್ಮಿ ಪಕ್ಷದಿಂದಲೇ ಚುನಾವಣಾ ಅಖಾಡಕ್ಕೆ ಇಳಿಯುತ್ತಾರೆ ಎಂದು ಹೇಳಲಾಗುತ್ತಿದ್ದರೂ ಅವರು ರಾಜಕೀಯ ವಲಯದತ್ತ ಆಸಕ್ತಿ ತೋರಿರಲಿಲ್ಲ.
ಆದರೆ ಉಪ್ಪಿ ಅವರ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದಾದರೂ ಪಕ್ಷದ ಚಿಹ್ನೆಯಿಂದಲೋ ಅಥವಾ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೋ ಅಥವಾ ತಾವೇ ಹೊಸ ಪಕ್ಷವನ್ನು ಹುಟ್ಟಿ ಹಾಕುತ್ತಾರೋ ಎಂಬುವುದನ್ನು ಅವರೇ ಸ್ಪಷ್ಟಪಡಿಸಬೇಕು.ಅಪಾರ ಅಭಿಮಾನಿಗಳನ್ನು ಹೊಂದಿರುವ ಉಪೇಂದ್ರ ಅವರು ರಾಜಕೀಯಕ್ಕೆ ಪ್ರವೇಶ ಪಡೆಯುತ್ತಿರುವುದಕ್ಕೆ ಅವರ ಸಾಕಷ್ಟು ಅಭಿಮಾನಿಗಳು ಅವರಿಗೆ ಈಗಾಗಲೇ ಶುಭ ಹಾರೈಸಿದ್ದಾರೆ. ಅವರು ಹೊಸ ಪಕ್ಷ ಕಟ್ಟುವುದಾದರೆ ತುಂಬಾ ಕಷ್ಟವಾಗುತ್ತದೆ, ತಾವು ಮುನ್ನೆಚ್ಚರಿಕೆ ವಹಿಸಬೇಕು, ನಿಮಗೆ ರಾಜಕೀಯದಲ್ಲಿ ಒಳ್ಳೆಯದಾಗಲಿ ಎಂದು ಟಿ.ಎನ್.ಸೀತಾರಾಮ್ ಹೇಳಿದ್ದಾರೆ.ಮಹದಾಯಿ ಹೋರಾಟದಲ್ಲಿ ಪಾಲ್ಗೊಳ್ಳುವ ಮೂಲಕ ರೈತರ ಬಗ್ಗೆ ಕಾಳಜಿ ಹೊಂದಿರುವ ಉಪೇಂದ್ರ ಅವರು ತಮ್ಮ ಸೂಪರ್, ಟೋಪಿವಾಲ, ಓಂಕಾರ ಚಿತ್ರಗಳಲ್ಲಿ ನಮ್ಮ ರಾಜಕಾರಣಿಗಳು ವಿದೇಶಗಳಲ್ಲಿ ಇಟ್ಟಿರುವ ಕಪ್ಪು ಹಣದ ಬಗ್ಗೆ ವಿಷಯದ ಬಗ್ಗೆ ಹಾಗೂ ಎಚ್‍ಟುಒ ಚಿತ್ರದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಿನ ನೀರಿನ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವ ಮೂಲಕ ಗಮನ ಸೆಳೆದಿದ್ದರು.

loading...