ಮಕ್ಕಳ ಸಾವು ದುರಂತ: ತಪ್ಪಿತಸ್ಥರನ್ನು ಬಿಡುವುದಿಲ್ಲ ಸಿಎಂ ಯೋಗಿ

0
8
loading...

ಲಖನೌ: ಗೋರಕ್‍ಪುರ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮಕ್ಕಳು ಸಾವನ್ನಪ್ಪಿರುವುದು ಘೋರ ದುರಂತವಾಗಿದ್ದು, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಹೇಳಿದ್ದಾರೆ.
ಗೋರಕ್‍ಪುರ ಆಸ್ಪತ್ರೆ ದುರಂತ ಪ್ರಕರಣ ಸಂಬಂಧ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಅವರು, ಮಕ್ಕಳ ಸಾವು ದುರಾದೃಷ್ಟಕರ. ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ದುರಂತ ಸಂಬಂಧ ಸಂಪೂರ್ಣ ಮಾಹಿತಿ ಪಡೆದ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ತನಿಖೆ ನಡೆಸಲು ರಾಜ್ಯ ಮುಖ್ಯ ಕಾರ್ಯದರ್ಶಿ ಅಡಿಯಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಆಸ್ಪತ್ರೆಗೆ ಆಮ್ಲಜನಕ ಪೂರೈಸಲು ಗ್ಯಾಸ್ ವೆಂಡರ್ ಗಳನ್ನು ನೇಮಿಸಲಾಗಿತ್ತು. ಈ ಕುರಿತು ಈಗಾಗಲೇ ತನಿಖೆ ಆರಂಭವಾಗಿದೆ. ಬಿಆರ್ ಡಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅವರ ವಿರುದ್ಧ ತನಿಖೆ ನಡೆಸಲಾಗುತ್ತದೆ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

loading...