ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಶೇ.70 ರಷ್ಟು ಮೀಸಲಾತಿ: ಸಿಎಂ

0
13
loading...

ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಸರ್ಕಾರಿ ಉದ್ಯೋಗ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇ. 70 ರಷ್ಟು ಮೀಸಲಾತಿ ಸೌಲಭ್ಯ ಒದಗಿಸುವ ಭರವಸೆ ನೀಡಿದ್ದಾರೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ, ತಪೋವನ ಉದ್ಘಾಟನೆ ಹಾಗೂ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು,
ಪರಿಶಿಷ್ಟ ಜಾತಿ ಮತ್ತು ಪಂಗಡ ಮತ್ತು ಹಿಂದುಳಿದ ವರ್ಗದವರ ಒಟ್ಟಾರೆ ಮೀಸಲಾತಿ ಮಿತಿಯನ್ನು ಶೇ. 50ರಿಂದ ಶೇ. 70ಕ್ಕೆ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಪರಿಶಿಷ್ಟ ಜಾತಿಯವರಿಗೆ ಶೇ. 15ರಷ್ಟು ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 7.5ರಷ್ಟು ಮೀಸಲಾತಿ ಜಾರಿ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದ ಅವರು ಇದನ್ನು ನಾನು ವೋಟಿಗಾಗಿ ಮಾಡುತ್ತಿಲ್ಲ, ಎಲ್ಲಾ ಸಮುದಾಯದವರಿಗೂ ಸಾಮಾಜಿಕ ನ್ಯಾಯ ಒದಗಿಸುವ ದೃಷ್ಟಿಯಿಂದ ಈ ಮೀಸಲಾತಿ ತರಲಾಗುವುದು ಎಂದರು. ದಲಿತರಿಗಾಗಿ ನಾವು ಈಗಾಗಲೇ 25 ಸಾವಿರ ಕೋಟಿ ಹಣ ಖರ್ಚು ಮಾಡಿದ್ದೇವೆ, ಈ ವರ್ಷ 7 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದೇವೆ ಎಂದು ತಿಳಿಸಿದರು.
ಚುನಾವಣಾ ಹೊಸ್ತಿಲಿನಲ್ಲಿರುವ ಸಿದ್ದರಾಮಯ್ಯ ಸರ್ಕಾರ, ವಿಧಾನಸೌಧ ಮತ್ತು ಶಾಸಕರ ಭವನದ ನಡುವೆ ಸುಮಾರು 1 ಕೋಟಿ ರೂ. ವ್ಯಯಿಸಿ 12 ಅಡಿ ಎತ್ತರದ ಮಹರ್ಷಿ ವಾಲ್ಮೀಕಿ ಪ್ರತಿಮೆ ನಿರ್ಮಿಸಿದೆ.

loading...