ಅಭಿವೃದ್ಧಿ ಪತ್ರಿಕೋದ್ಯಮದ ಹರಿಕಾರ ಪಿ. ಸಾಯಿನಾಥ್ ಅವರಿಗೆ ಬಸವಶ್ರೀ ಪ್ರಶಸ್ತಿ

0
4
loading...

ಚಿತ್ರದುರ್ಗ:- ಹಿರಿಯ ಪತ್ರಕರ್ತ ಪಿ.ಸಾಯಿನಾಥ್ 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.
ಚಿತ್ರದುರ್ಗದ ಮುರುಘಾಮಠ ದಿಂದ ಕೊಡಮಾಡುವ ಈ ಪ್ರಶಸ್ತಿಗೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಪಿ. ಸಾಯಿನಾಥ್ ಆಯ್ಕೆ ಆಗಿದ್ದಾರೆ ಎಂದು ಶಿವಮೂರ್ತಿ ಮುರುಘಾಶರಣರು ಪ್ರಕಟಿಸಿದರು. ಪತ್ರಿಕೋದ್ಯಮ ಕ್ಷೇತ್ರಕ್ಕೆ ಸಾಯಿನಾಥ್ ನೀಡಿರುವ ಕೊದುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಬಸವಶ್ರೀ ಪ್ರಶಸ್ತಿ ಯು ರೂ. 5 ಲಕ್ಷ ನಗದು, ಪ್ರಮಾಣಪತ್ರ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಅ.23 ರಂದು ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
12 ನೆಯ ಶತಮಾನದ ಸಾಮಾಜಿಕ ಸುಧಾರಕ ಬಸವೇಶ್ವರನ ತತ್ವಗಳನ್ನು ಅನುಸರಿಸಿ ಸಮಾಜಕ್ಕೆ ತಮ್ಮ ವಿಶೇಷ ಕೊಡುಗೆ ನೀಡಿದವರನ್ನು ಗುರುತಿಸಿ ಈ ಪ್ರಶಸ್ತಿ ನೀದಲಾಗುತ್ತದೆ ಎಂದು ಸ್ವಾಮೀಜಿ ಹೇಳಿದರು.

loading...