ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0
4
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ನಗರದ ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ಬಾಲಕಿಯರ ವಿಭಾಗದಿಂದ ವಂಶಿಕಾ ಮೌಲ್ಯಾ ಹಾಗೂ ಬಾಲಕರ ವಿಭಾಗದಿಂದ ಸೋಮಶೇಖರ ಕೋರಿಶೆಟ್ಟಿ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇತ್ತಿಚಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಈಜು ಸ್ಪರ್ಧೆಯಲ್ಲಿ ಮಹಾವಿದ್ಯಾಲಯದ ಈ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್.ಜಿ. ನಂಜಪ್ಪನವರ ಮತ್ತು ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿವರ್ಗದವರು ಹಾಗೂ ವಿದ್ಯಾರ್ಥಿ ವೃಂದದವರು ಪ್ರಕಟಣೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

loading...