ಸಾಲ ವಸೂಲಿ ಮತ್ತು ದಿವಾಳಿತನ ತಿದ್ದುಪಡಿಗೆ ಸಂಪುಟ ಅಸ್ತು: ಶೀಘ್ರ ಸುಗ್ರೀವಾಜ್ಞೆ

0
13
loading...

ನವದೆಹಲಿ: ಹಣಕಾಸು ಪರಿಸ್ಥಿತಿ ಮತ್ತು ದಿವಾಳಿ ನೀತಿಸಂಹಿತೆಯಲ್ಲಿ ಕೆಲ ತಿದ್ದುಪಡಿ ತರಲು ಶೀಘ್ರದಲ್ಲಿಯೇ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ವಿತ್ತ ಹಾಗೂ ಕಂಪನಿ ವ್ಯವಹಾರಗಳ ಸಚಿವ ಅರುಣ್ ಜೇಟ್ಲಿ ಅವರು, ಕಾಲಮಿತಿಗೆ ಒಳಪಟ್ಟು ಬ್ಯಾಂಕ್ ಗಳ ಸಾಲ ವಸೂಲಾತಿ ಪ್ರಕ್ರಿಯೆ ನಡೆಸಲು ಕಳೆದ ವರ್ಷದ  ಡಿಸೆಂಬರ್‍ನಿಂದಲೇ ಈ ಸಂಹಿತೆ ಜಾರಿಗೆ ತರಲಾಗಿದ್ದು, ಕಂಪನಿ ವ್ಯವಹಾರ ಸಚಿವಾಲಯವು ಇದನ್ನು ಕಾರ್ಯಗತಗೊಳಿಸುತ್ತಿದೆ ಎಂದು ಹೇಳಿದರು.

ಕೆಲ ಉದ್ದಿಮೆಗಳ ಪ್ರವರ್ತಕರು ಸಾಲ ವಸೂಲಾತಿ ಪ್ರಕ್ರಿಯೆಯಲ್ಲಿ ಉದ್ದಿಮೆ ಮೇಲೆ ಮತ್ತೆ ಹಿಡಿತ ಸಾಧಿಸಲು ಹವಣಿಸುತ್ತಿದ್ದಾರೆ ಎನ್ನುವ ಆರೋಪವೂ ಕೇಳಿ ಬರುತ್ತಿದೆ. ಇದೇ ಕಾರಣಕ್ಕೆ ಕಾಯ್ದೆ ಜಾರಿಯಲ್ಲಿ ಎದುರಾಗುತ್ತಿರುವ  ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಸಲಹೆ ನೀಡಲು ಕೇಂದ್ರ ಸರ್ಕಾರ ಈಗಾಗಲೇ 14 ಸದಸ್ಯರ ಸಮಿತಿ ರಚಿಸಿದೆ.

ಇದೇ ವೇಳೆ ಯುರೋಪಿಯನ್ ಬ್ಯಾಂಕ್ ಪುನರ್ನಿರ್ಮಾಣ ಮತ್ತು ಅಭಿವೃದ್ಧಿಯಲ್ಲಿ ಭಾರತ ಸದಸ್ಯತ್ವ ಪಡೆಯಲೂ ಕೂಡ ಬುಧವರಾ ನಡೆದ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ. ಆ ಮೂಲಕ ಭಾರತದ ಆರ್ಥಿಕ  ಹಿತಾಸಕ್ತಿಗಳನ್ನು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರಚುರ ಪಡಿಸಲು ಇದು ನೆರವಾಗಲಿದೆ ಎಂದು ಹೇಳಲಾಗಿದೆ. ಅಂತೆಯೇ ಒಂದು ವೇಳೆ ಸದಸ್ಯತ್ವ ದೊರೆತಿದ್ದೇ ಆದರೆ ಇಬಿಆರ್ ಡಿಯಿಂದಲೂ ಭಾರತಕ್ಕೆ ಆರ್ಥಿಕ ನೆರವು  ದೊರೆಯುವ ವಿಶ್ವಾಸವಿದೆ.

loading...