ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ

0
7
loading...

ಹುಬ್ಬಳ್ಳಿ: ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಬಾಲಕಿಯರು, ಮಹಿಳೆಯರ ಮೇಲೆ ಅತ್ಯಾಚಾರ ಎಸಗುವ ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಹುಬ್ಬಳ್ಳಿ ಕಟ್ಟಡ ಕಾರ್ಮಿಕರ ಸಂಘ ಹಾಗೂ ವಿವಿಧ ಮಹಿಳಾ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು. ನಗರದ ತಹಶಿಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ತಹಶಿಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ದೇಶದಲ್ಲಿ ಬಾಲಕಿಯರ ಮೇಲೆ ನಡೆಯುವ ಕೃತ್ಯಗಳಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದರು. ಅತ್ಯಾಚಾರ ಪ್ರಕರಣಗಳನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

loading...