ರೈತರ ಸಾಲಮನ್ನಾ ಮಾಡ್ತೀನಿ: ಸಿಎಂ

0
10

loading...

ಬೆಂಗಳೂರು: ರಾಜ್ಯದ ರೈತರ ಹಿತ ಕಾಯಲು ನಾನು ಬದ್ಧ. ಅದು ಆಗುವುದಿಲ್ಲ ಎಂದರೆ ನಾನು ಕುರ್ಚಿಗಂಟಿಕೊಂಡು ಕೂರುವುದಿಲ್ಲ. ನಾನೇ ರಾಜೀನಾಮೆ ಕೊಟ್ಟು ಹೋಗುತ್ತೇನೆ. ವಿಶ್ವಾಸಮತ ಸಾಬೀತಾಗಿ ಕೇವಲ ಎರಡು ದಿನವಾಗಿದೆ. ಸಚಿವ ಸಂಪುಟ ವಿಸ್ತರಣೆಯಾಗಬೇಕು. ಕನಿಷ್ಠ ಒಂದು ವಾರವಾದರೂ ಬೇಡವೇ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಯಡಿಯೂರಪ್ಪನವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು.

ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಹರಲಾಲ್ ನೆಹರು ಅವರ 54ನೇ ಪುಣ್ಯ ತಿಥಿ ಅಂಗವಾಗಿ ವಿಧಾನಸಭೆ ಆವರಣದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ರೈತರ ಹಿತ ಬಯಸುವಲ್ಲಿ ಎಲ್ಲರಿಗಿಂತ ಒಂದು ಹೆಜ್ಜೆ ಮುಂದೆ ಇದ್ದೇನೆ.
ರೈತರ ಸಹಕಾರಿ ಬ್ಯಾಂಕ್, ರಾಷ್ಟ್ರೀಕೃತ ಬ್ಯಾಂಕ್‍ಗಳ ಸಾಲ ಮನ್ನಾ ಮಾಡುವ ಬದ್ಧತೆ ನನ್ನದಾಗಿದೆ. ಆದರೆ ಯಡಿಯೂರಪ್ಪನವರು ಸಮಾಜದಲ್ಲಿ ಹುಳಿ ಹಿಂಡುವ ಕೆಲಸ ಮಾಡುವುದನ್ನು ಬಿಡಬೇಕು ಎಂದರು.
ಬಿ.ಎಸ್.ಯಡಿಯೂರಪ್ಪ ಅಧಿಕಾರದಲ್ಲಿದ್ದಾಗ ಏನೇನು ಮಾಡಿದರು ಎಂಬುದು ಗೊತ್ತಿಲ್ಲವೇ? ಅವರು ಶ್ರೀಮಂತರ ಬಳಿ ರೈತರು ಸಾಲ ಮಾಡಿರುವುದನ್ನು ಮನ್ನಾ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಚುನಾವಣಾ ಸಂದರ್ಭದಲ್ಲಿ ನಾನು ಲೇವಾದೇವಿದಾರರಿಂದಲೂ ರೈತರು ತೊಂದರೆ ಅನುಭವಿಸುದ್ದು, ಅದಕ್ಕೆ ಪರಿಹಾರ ಒದಗಿಸಬೇಕಾಗಿದೆ ಎಂದು ಹೇಳಿದ್ದೆ. ಹಾಗಾಗಿ ರಾಷ್ಟ್ರೀಕೃತ ಸಹಕಾರಿ ಬ್ಯಾಂಕ್‍ಗಳಲ್ಲಿರುವ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದೆ. ಅದನ್ನು ಮಾಡುತ್ತೇನೆ ಎಂದು ಹೇಳಿದರು.

loading...