ಅಚ್ಚುಮೆಚ್ಚಿನ ಪುಸ್ತಕ ಸ್ಪರ್ಧೆ

0
22
loading...

ಗದಗ : ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸುವ ಕುರಿತು ಯೋಜನೆಯನ್ನು ಹಮ್ಮಿಕೊಂಡಿದೆ.
ಈ ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳು ತಮ್ಮ ತಮ್ಮ ಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಹಾಗೂ ರಸಪ್ರಶ್ನೆಯ ಒಂದು ಕಾರ್ಯಕ್ರಮ ಏರ್ಪಡಿಸಬಹುದಾಗಿದೆ. ಈ ಕಾರ್ಯಕ್ರಮವನ್ನು ನಡೆಸುವ ಸಲುವಾಗಿ ಪ್ರಾಧಿಕಾರವು 5 ಸಾವಿರ ರೂ.ಗಳ ಗರಿಷ್ಟ ಮಿತಿಯೊಳಗೆ ವೆಚ್ಚವನ್ನು ಭರಿಸುವುದು. ತಮ್ಮ ಶಾಲಾ ವಿವರಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಬಹುದಾದ ದಿನಾಂಕ, ಆಹ್ವನಿಸುವ ಇಬ್ಬರು ತೀರ್ಪುಗಾರರ ಹೆಸರು ಇತ್ಯಾದಿ ವಿವರಗಳೊಂದಿಗೆ ಆಯಾ ಶಾಲಾ ಮುಖ್ಯಸ್ಥರು ಸ್ವಯಂ ಅರ್ಜಿ ಸಲ್ಲಿಸಲು ಜೂ. 30 ಕೊನೆಯ ದಿನವಾಗಿದೆ.
ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು 560 002, ದೂರವಾಣಿ ಸಂಖ್ಯೆ 080-22484516/22107704 ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ ಸೈಟ್ www.kannadapustakapradhikara.com ನ್ನು ಸಂಪರ್ಕಿಸಬಹುದಾಗಿದೆ.

loading...