ರೈತರ ನೆರವಿಗೆ ಜಾರ್ಖಂಡದಿಂದ ವಿದ್ಯುತ್ ಖರೀದಿ

0
2
loading...

Fiundation to Palya Village Shifting & Construction of Houses1ದಾವಣಗೆರೆ, ನ. 27: ಜಾರ್ಖಂಡದಿಂದ ಹೆಚ್ಚಿನ ವಿದ್ಯುತ್ ಖರೀದಿಸಿ ರಾಜ್ಯದಲ್ಲಿ ತೆಲದೋರಿರುವ  ವಿದ್ಯುತ್ ಸಮಸ್ಯೆಯನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಜನರಿಗೆ ಭರವಸೆಯನ್ನು  ನೀಡಿದ್ದಾರೆ.

ದಾವಣಗೆರೆ ಹಳೆ ಪಾಳ್ಯ ಗ್ರಾಮದಲ್ಲಿ ನವಗ್ರಾಮ ನಿರ್ಮಾಣಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆಯಾಗಿರುವುದರಿಂದ ಅಭಾವ ಉಂಟಾಗಿದೆ.

ಇದರಿಂದ ರೈತರು ಸೇರಿದಂತೆ ಎಲ್ಲರಿಗೂ ತೀವ್ರ ತೊಂದರೆಯಾಗಿರುವುದು ನನ್ನ ಅನುಭವಕ್ಕೆ ಬಂದಿದೆ. ಇದರಿಂದಾಗಿ ಕೂಡಲೇ ಇದನ್ನು ಸರಿಪಡಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. ರೈತರಿಗೆ ಹೆಚ್ಚಿನ ವಿದ್ಯುತ್ ನೀಡಲು ಸಾಧ್ಯವಾಗುತ್ತಿಲ್ಲ. ಸಮಸ್ಯೆ ಬಗೆಹರಿಸಿ ಶೀಘ್ರದಲ್ಲಿ ಪಂಪ್ ಸೆಟ್ಗಳಿಗೆ ಹೆಚ್ಚಿನ ಪೇಸ್ನಲ್ಲಿ ವಿದ್ಯುತ್ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದರು. ಗ್ರಾಮೀಣಾ ಪ್ರದೇಶದಲ್ಲಿ ಯಾವುದೇ ತೊಂದರೆಇದ್ದರು ಹಂತ ಹಂತವಾಗಿ ಪರಿಹರಿಸಲಾಗುತ್ತದೆ ಎಂದು ಹೇಳಿದ ಮುಖ್ಯಮಂತ್ರಿಗಳು ಬೆಳೆ ನಾಶವಾಗಿ ರೈತರು ಹತಾಶರಾಗಿದ್ದಾರೆ.

ಇದು ನನಗೆ  ತೀವ್ರ ನೋವು ತಂದಿದೆ. ಬೆಳೆ ಹಾನಿ ಪರಿಹಾರ ನೀಡಲು ಶೀಘ್ರವೇ ಕ್ರಮ ಕೈಗೊಂಡು ಎಲ್ಲರಿಗೂ ಪರಿಹಾರ ನೀಡಿದ್ದೇವೆ ಎಂದು ಭರವಸೆ ನೀಡಿದರು. ರಾಜ್ಯದ ಜನರು ಆರೋಗ್ಯ ಹಾಗೂ ವಿವಿಧ ಜಿಲ್ಲೆಗಳ ರಸ್ತೆಯ ಅಭಿವೃದ್ದಿ ಹೆಚ್ಚಿನ ಆಧ್ಯತೆಯನ್ನು ನೀಡಲಾಗುವುದು ಎಂದು ಹೇಳಿದ ಅವರು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಸರಿಯಾದ ಪರಿಹಾರ ನೀಡುತ್ತಿಲ್ಲ ಎಂದು ವಿರೋಧಿ ಪಕ್ಷಗಳು ಆರೋಪ ಮಾಡುತ್ತಿವೆ.  ಆದರೆ ಇದರಲ್ಲಿ ಯಾವುದೇ ಹುಳುಕು ಇರುವುದಿಲ್ಲ ಎಂದು ಯಡಿಯೂರಪ್ಪ ತಿರುಗೇಟು ನೀಡಿದರು.

ಇತ್ತೀಚೆಗೆ ಪಕ್ಷದಲ್ಲಿ ಉಂಟಾದ ಸಣ್ಣ ಸಮಸ್ಯೆಯೆಂದು ಕೆಲವು ದಿನ ಉತ್ತರ ಕರ್ನಾಟಕಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಆದರೆ ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆ ಮಾಡುವಲ್ಲಿ ಯಾವುದೇ ತೊಂದರೆ ಉಂಟಾಗಿಲ್ಲ ಅವರು ಸ್ಪಷ್ಟಪಡಿಸಿದರು.ಇನ್ನೂ ಉತ್ತರ ಕರ್ನಾಟಕದಲ್ಲಿ ಪರಿಹಾರ  ನೀಡುವ ಕಾರ್ಯವನ್ನು ಮಾಡಬೇಕಾಗಿದೆ. ಅದನ್ನು ಅಧಿಕಾರಿಗಳು ಶಾಸಕರು ಮತ್ತು ಸಚಿವರು ಒಟ್ಟಾಗಿ ಮಾಡುತ್ತಾರೆ ನಾನು ಉಸ್ತುವಾರಿಯನ್ನು ನೋಡಿ ಕೊಳ್ಳುತ್ತೇನೆ ಜನರಿಗೆ  ಯಾವುದೇ ತೊಂದರೆಯಾಗದಂತೆ ನೋಡಿ ಕೊಳ್ಳಲಾಗುವುದು ಎಂದರು.

loading...

LEAVE A REPLY

Please enter your comment!
Please enter your name here