ಅನಧಿಕೃತ ಸ್ಫೋಟಕಗಳನ್ನು ಪತ್ತೆ ಹಚ್ಚಲುಸಚಿವ ನಿರಾಣಿ ಸೂಚನೆ

0
15

 

ಬೆಂಗಳೂರು-ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಸ್ಟೋಟಕ ವಸ್ತುಗಳನ್ನು ಯಾರಾದರೂ ಸಂಗ್ರಹಿಸಿಟ್ಟಿದ್ದರೆ, ತಕ್ಷಣವೇ ಪತ್ತೆ ಹಚ್ಚಬೇಕೆಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಿರೇನಾಗವಲ್ಲಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು,ರಾಜ್ಯದ ನಾನಾ ಭಾಗಗಳಲ್ಲಿ ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಸ್ಟೋಟಕ ವಸ್ತುಗಳನ್ನು ಸಂಗ್ರಹಿಸಿರುವ ಬಗ್ಗೆ ಸಾರ್ವಜನಿಕರಿಂದ ನನಗೆ ದೂರುಗಳು ಬಂದಿವೆ ಎಂದು ಹೇಳಿದರು.

ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನಚರಿಕೆ ಕ್ರಮಗಳನ್ನುತೆಗೆದುಕೊಳ್ಳಲಾಗುವುದು.ಇಲಾಖೆಯಿಂದ ಅನುಮತಿ ಪಡೆಯದೆ, ಸ್ಟೋಟಕ ವಸ್ತುಗಳನ್ನು ಬಳಸಿದರೆ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದರು.

ಸ್ಟೋಟಕ ವಸ್ತುಗಳನ್ನು ಬಳಕೆ ಮಾಡಬೇಕಾದರೆ, ಸರಕಾರದಿಂದ ಲೈಸೆನ್ಸ್ ಪಡೆದಿರಬೇಕು.ಇನ್ನು ಮುಂದೆ ಇಂತಹ ಘಟನೆಗಳಿಗೆ ಕಾರಣರಾದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದೆಂದು ಗುಡುಗಿದರು.

ಸಾರಿಗೆ ಹಾಗೂ ಗೃಹ ಇಲಾಖೆಯ ಸಹಭಾಗಿತ್ವದಲ್ಲಿ ರಾಜ್ಯದ ಪ್ರತಿಯೊಂದು ಚಕ್ ಪೋಸ್ಟ್‌ ಗಳಲ್ಲಿ ಬಿಗಿಯಾದ ತಪಾಸಣೆ ನಡೆಸಲಾಗುವುದು.
ಹೊರರಾಜ್ಯಗಳಿಂದ ಬರುವ ಹಾಗೂ ಇಲ್ಲಿಂದ ಹೋಗುವ ವಾಹನಗಳ ಮೇಲೆ ಹದ್ದಿನ ಕಣ್ಣಿಡಲಾಗುವುದೆಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಸ್ಟೋಟಕ ವಸ್ತುಗಳನ್ನು ಬಳಕೆಯನ್ನು ಅನುಮತಿ ಪಡೆದವರು ಮಾತ್ರ ಬಳಸಬೇಕೆಂಬ ಕಾನೂನು ಜಾರಿಮಾಡಲಿದ್ದೇವೆ.ಇದರಿಂದ ಇಂತಹ ಅನಾಹುತಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಸಚಿವ ನಿರಾಣಿ ಅವರು ಅಭಿಪ್ರಾಯಪಟ್ಟರು.

ಅಧಿಕಾರಿಗಳಿಗೆ ಎಚ್ಚರಿಕೆ
ರಾಜ್ಯದಲ್ಲಿ ಪುನಃ ಪುನಃ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ.
ತಕ್ಷಣವೇ ಅಧಿಕಾರಿಗಳು ಎಚ್ಚೆತ್ತುಕೊಂಡು ಅನಾಹುತ ತಡೆಯದಿದ್ದರೆ,ಅಂತಹವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಡರು.
ಸ್ಟೋಟಕ ವಸ್ತುಗಳನ್ನು ಸಾಗಾಣಿಕೆ ಮಾಡುವ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾರಾದರೂ ಉದಾಸೀನ ತೋರಿದರೆ, ಶಿಸ್ತು ಕ್ರಮ ಖಚಿತ ಎಂದು ಪುನರುಚ್ಚರಿಸಿದರು.
ಈ ಘಟನೆಯಲ್ಲಿ ಯಾರೇ ಭಾಗಿಯಾದರೂ ಅವರಿಗೆ ಕಾನೂನಿನ ಪ್ರಕಾರವೇ ಕ್ರಮ ಜರುಗಿಸಲಾಗುವುದು.ಎಷ್ಟೇ ಪ್ರಭಾವಿಗಳಾಗಿದ್ದರೂ ಸುಮ್ಮನೆ ಬಿಡುವುದಿಲ್ಲ ಎಂದರು.

ಘಟನೆಯ ಸತ್ಯಾ ಸತ್ಯತೆ ತಿಳಿಯಲು ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು
ಸಿಐಡಿ ತನಿಖೆಗೆ ಆದೇಶದ ಮಾಡಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.
ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ನಿರಾಣಿ ಅವರು ಸಾಂತ್ವನ ಹೇಳಿ, ಗಾಯಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲಾಗುವುದೆಂದು ಹೇಳಿದರು.

ಇದಕ್ಕೂ ಮುನ್ನ ಸಚಿವ ನಿರಾಣಿ ಅವರು ನವದೆಹಲಿಯಿಂದ ಬೆಂಗಳೂರಿಗೆ ರಾತ್ರಿ ಆಗಮಿಸಿದ ನಂತರ ನೇರವಾಗಿ ಘಟನಾ ಸ್ಥಳಕ್ಕೆ ಭೇಟಿ ನೀಡಿದರು.

ಸಚಿವರಿಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಟಧಿಕಾರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಸಾಥ್ ನೀಡಿದರು.

loading...