ಆ.20 ರವರೆಗೆ ಶಾಲೆಗಳಿಗೆ ರಜೆ ವಿಸ್ತರಿಸುವಂತೆ ಜಿಲ್ಲಾಧಿಕಾರಿಗೆ ಶಾಸಕ ಸತೀಶ ಜಾರಕಿಹೊಳಿ ಮನವಿ

0
21

ಆ.20 ರವರೆಗೆ ಶಾಲೆಗಳಿಗೆ ರಜೆ ವಿಸ್ತರಿಸುವಂತೆ ಜಿಲ್ಲಾಧಿಕಾರಿಗೆ ಶಾಸಕ ಸತೀಶ ಜಾರಕಿಹೊಳಿ ಮನವಿ

ಬೆಳಗಾವಿ: ಪ್ರವಾಹದಿಂದ ಚೇತರಿಸಿಕೊಳ್ಳಲಾಗದ ಬೆಳಗಾವಿ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಆ. 20ರವರೆಗೆ ಶಾಲೆಗಳಿಗೆ ರಜೆ ಮುಂದುವರೆಸುವಂತೆ ಮಾಜಿ ಸಚಿವ, ಶಾಸಕ ಸತೀಶ ಜಾರಕಿಹೊಳಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಕಳೆದ ಹದಿನೈದು ದಿನದಿಂದ ಪ್ರವಾಹದಿಂದ ಜಿಲ್ಲೆಯಲ್ಲಿ ಮನೆ ಆಸ್ತಿ ಪಾಸ್ತಿ ಕಳೆದುಕೊಂಡ ಸಂತ್ರಸ್ತರು ಚೇತರಿಸಿಕೊಳ್ಳಲು ಇನ್ನು ಸಮಯಬೇಕಿದೆ. ಈ ಹಿನ್ನಲೆ ಮಕ್ಕಳು ಶಾಲೆಗೆ ಹೋಗಲಾರದಂತೆ ಸ್ಥಿತಿಯಲ್ಲಿರುವ ತಾಲೂಕಗಳನ್ನು ಗುರುತಿಸಿ ಅಂತಹ ಪ್ರದೇಶಗಳಲ್ಲಿ ಆ.20 ರವೆಗೆ ಶಾಲೆಗಳಿಗೆ ರಜೆ ವಿಸ್ತರಿಸುವಂತೆ ಮನವಿಿ ಮಾಡಿಕೊಂಡಿದ್ದಾರೆ.

ಕಳೆದ ಹದಿನೈದು ದಿನಗಳಿಂದ ಜಿಲ್ಲಾದ್ಯಂತ ಪ್ರವಾಹ ಪಿಡೀತ ಪ್ರದೇಶಗಳಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಲ್ಲಿನ ಸ್ಥಿತಿಗತಿ ತುಂಬಾ ಹದಗೆಟ್ಟಿದೆ. ಈಗಷ್ಟೇ ಪರಿಹಾರ ಕಾರ್ಯಗಳು ಕ್ಷಿಪ್ರಗತಿಯಲ್ಲಿ ನಡೆಯುತ್ತಿವೆ. ಎಂದು ಕಂಡರಿಯದಂತ ಪ್ರವಾಹದಿಂದ ಜಿಲ್ಲೆಯ ಜನತೆ ತತ್ತರಿಸಿದ್ದು, ತಕ್ಷಣವೇ ಚೇತರಿಸಿಕೊಳ್ಳುವುದು ಅಸಾಧ್ಯ. ಹಾಗಾಗೀ ನೆರೆ ಸಂತ್ರಸ್ತರ ಒಳಿತಿಗಾಗಿ ಎಲ್ಲವನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ.

loading...