ಇಬ್ಬರು ಸದಸ್ಯರಿಗೆ ಸರ್ಕಾರಿ ನೌಕರಿಗೆ ಕಮಲೇಶ್ ಪತ್ನಿ ಬಿಗಿಪಟ್ಟು

0
5

ಲಕ್ನೋ- ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಭೇಟಿ ನೀಡಿ ಸಾಂತ್ವನ ಹೇಳಬೇಕು, ಜೊತೆಗೆ ಕುಟುಂಬದ ಇಬ್ಬರು ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡದಿದ್ದರೆ ಹಿಂದೂ ಸಮಾಜ ಪಕ್ಷದ ಮುಖಂಡ ಕಮಲೇಶ್ ತಿವಾರಿಯ ಅಂತ್ಯಕ್ರಿಯೆ ನೇರವೇರಿಸುವುದಿಲ್ಲ ಎಂದು ಅವರ ಪತ್ನಿ ಬಿಗಿಪಟ್ಟು ಹಿಡಿದಿದ್ದಾರೆ .

ಲಕ್ನೋದ ಖುರ್ಷಿದ್ ಬಾಗ್ ನಲ್ಲಿರುವ ಹಿಂದೂ ಸಮಾಜ್ ಪಕ್ಷದ ಕಚೇರಿಯಲ್ಲಿ ಅಪರಿಚಿತ ವ್ಯಕ್ತಿಗಳು ಹಾಡಹಗಲೇ ಪಕ್ಷದ ಮುಖಂಡ ಕಮಲೇಶ್ ತಿವಾರಿಗೆ ಗುಂಡು ಹಾರಿಸಿ, ಕತ್ತನ್ನು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದರು .
ಯೋಗಿ ಅದಿತ್ಯನಾಥ್ ಭೇಟಿ ನೀಡಿ ಕುಟುಂಬದ ಇಬ್ಬರು ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಇಲ್ಲದಿದ್ದರೆ ಪ್ರಾಣತ್ಯಾಗ ಮಾಡುವುದಾಗಿ ಕಮಲೇಶ್ ತಿವಾರಿ ಪತ್ನಿ ಬೆದರಿಕೆಯ ಹೇಳಿಕೆ ನೀಡಿದ್ದಾರೆ.
ಇದಕ್ಕೂ ಮುನ್ನ ಕಮಲೇಶ್ ತಿವಾರಿ ಪತ್ನಿ ಅನುಮಾನದ ಆಧಾರದ ಮೇಲೆ ಇಬ್ಬರು ಮೌಲ್ವಿಗಳ ಮೇಲೆ ದೂರು ದಾಖಲಿಸಿದ್ದಾರೆ. ಈ ನಡುವೆ ಹಂತಕರ ಪತ್ತೆಗೆ ಸರಕಾರ ವಿಶೇಷ ತನಿಖಾ ತಂಡ ರಚನೆಮಾಡಿದ್ದು ಪೊಲೀಸರು ಸಿಸಿಟಿವಿಗಳ ದೃಶ್ಯಾವಳಿಯ ಪರಿಶೀಲನೆ ನಡೆಸುತ್ತಿದ್ದಾರೆ.

loading...