ಬೆಂಗಳೂರ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ವಿರುದ್ಧ ಬಂಡೆದ್ದು ರಾಜೀನಾಮೆ ನೀಡಿದ್ದ 14 ಅತೃಪ್ತ ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಈ ಹಿಂದೆ ಮೂವರನ್ನು ಅನರ್ಹಗೊಳಿಸಿದ್ದರು. ಒಟ್ಟು 17 ಶಾಸಕರುವ ಅನರ್ಹಗೊಂಡಂತಾಗಿದೆ.
ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಈ ಶಾಸಕರು ಹಾಜರಾಗದೆ ಸೂಕ್ತ ಕಾರಣವನ್ನೂ ನೀಡದೆ ಇರುವುದರಿಂದ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅವರನ್ನು ಅನರ್ಹಗೊಳಿಸುತ್ತಿರುವುದಾಗಿ ಸ್ಪೀಕರ್ ಪ್ರಕಟಿಸಿದರು.
ಸ್ಪೀಕರ್ ರಮೇಶ್ ಕುಮಾರ್ ಇಂದು ಬೆಳಗ್ಗೆ 11:30ಕ್ಕೆ ಶಾಸಕರ ಭವನದಲ್ಲಿ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಸ್ಪೀಕರ್ ಈ ತೀರ್ಮಾನ ಪ್ರಕಟಿಸಿದರು.
ರಾಜೀನಾಮೆ ಇತ್ಯರ್ಥಗೊಳಿಸಲೇಬೇಕಾದ ಅನಿವಾರ್ಯತೆ ಬಂದಿದೆ. ಸೋಮವಾರ ಅಧಿವೇಶನ ಇರುವುದರಿಂದ ಇಂದು ಇತ್ಯರ್ಥಗೊಳಿಸಲೇಬೇಕಾದ ಅನಿವಾರ್ಯತೆ ಬಂದಿದೆ ಎಂದು ರಮೇಶ್ ಕುಮಾರ್ ತಿಳಿಸಿದರು.
ಶಾಸಕರಾದ ಪ್ರತಾಪ್ಗೌಡ ಪಾಟೀಲ್, ಬಿ ಸಿ ಪಾಟೀಲ್, ಶಿವರಾಮ ಹೆಬ್ಬಾರ್, ಎಸ್ ಟಿ ಸೋಮಶೇಖರ್, ಬೈರತಿ ಬಸವರಾಜು, ಆನಂದ್ ಸಿಂಗ್ ರೋಷನ್ ಬೇಗ್, ಮುನಿರತ್ನ, ಸುಧಾಕರ್, ಎಂಟಿಬಿ ನಾಗರಾಜ್, ಎಚ್ ವಿಶ್ವನಾಥ್, ನಾರಾಯಣಗೌಡ, ಗೋಪಾಲಯ್ಯ, ಶ್ರೀಮಂತ ಪಾಟೀಲ್ರನ್ನು ಅನರ್ಹಗೊಳಿಸಿ ಸ್ಪೀಕರ್ ತೀರ್ಪು ಪ್ರಕಟಿಸಿದ್ದಾರೆ.