ಏ. ೨೯, ೩೦ ರಂದು ಸಾಮಾನ್ಯ ಪ್ರವೇಶ ಪರೀಕ್ಷೆ

0
23

 

ಕನ್ನಡಮ್ಮ ಸುದ್ದಿ-ಕೊಪ್ಪಳ: ವೃತ್ತಿಪರ ಕೋರ್ಸ್ಗಳಿಗೆ ೨೦೧೯ನೇ ಸಾಲಿನ ಸಾಮಾನ್ಯ (ಸಿಇಟಿ) ಪ್ರವೇಶ ಪರೀಕ್ಷೆಗಳು ಏ. ೨೯ ಮತ್ತು ೩೦ ರಂದು ಕೊಪ್ಪಳದಲ್ಲಿ ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಾಲಚಂದ್ರ ಅವರು ಸಂಬಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಮಾನ್ಯ ಪ್ರವೇಶ ಪರೀಕ್ಷೆಗಳ ನಿಮಿತ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಿಇಟಿ ಪರೀಕ್ಷೆಗಳು ಸುಗಮವಾಗಿ ಹಾಗೂ ಕಟ್ಟುನಿಟ್ಟಾಗಿ ಜರುಗಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅವ್ಯವಹಾರಗಳು ನಡೆಯದಂತೆ ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ ಆದೇಶವನ್ನು ಈಗಾಗಲೇ ಹೊರಡಿಸಲಾಗಿದ್ದು, ಪೊಲೀಸ್ ಬಂದೋಬಸ್ತ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನಲ್ಲಿ ಝರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು.

ಪರೀಕ್ಷಾ ಕೇಂದ್ರಗಳು: ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಬಿ.ಎನ್.ಆರ್.ಕೆ ಪದವಿ ಪೂರ್ವ ಕಾಲೇಜು, ಲಯನ್ಸ್ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಹಾಗೂ ನವಚೇತನ ಪದವಿ ಪೂರ್ವ ಕಾಲೇಜು ಭಾಗ್ಯನಗರ, ಈ ೦೬ ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಗಳು ನಡೆಯಲಿವೆ ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಲ್.ಜಿ ರಾಟಿಮನಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಆಮಿತಾ ಯರಗೋಳ್ಕರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕೊಪ್ಪಳ ತಾಲೂಕಿನ ಪರೀಕ್ಷಾ ಕೇಂದ್ರಗಳ ಪ್ರಾಶುಂಪಾಲರು ಉಪಸ್ಥಿತರಿದ್ದರು.
೨೧೮೭ ಅಭ್ಯರ್ಥಿಗಳು ಪರೀಕ್ಷೆಗೆ: ನಗರದ ೦೬ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಸಿಇಟಿ ಪರೀಕ್ಷೆಗೆ ಒಟ್ಟು ೨೧೮೭ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಏ. ೨೯ ಬೆಳಿಗ್ಗೆ ೧೦-೩೦ ರಿಂದ ೧೧-೫೦ ಗಂಟೆಯವರೆಗೆ ಜೀವಶಾಸ್ತç ಹಾಗೂ ಮಧ್ಯಾಹ್ನ ೦೨-೩೦ ರಿಂದ ೦೩-೫೦ ಗಂಟೆಯವರೆಗೆ ಗಣಿತಶಾಸ್ತç ಮತ್ತು ಏ. ೩೦ ಬೆಳಿಗ್ಗೆ ೧೦-೩೦ ರಿಂದ ೧೧-೫೦ ಗಂಟೆಯವರೆಗೆ ಭೌತಶಾಸ್ತç ಹಾಗೂ ಮಧ್ಯಾಹ್ನ ೦೨-೩೦ ರಿಂದ ೦೩-೫೦ ಗಂಟೆಯವರೆಗೆ ರಸಾಯನಶಾಸ್ತç ವಿಷಯದ ಪರೀಕ್ಷೆ ನಡೆಯುವುದು. ಪ್ರತಿ ವಿಷಯಕ್ಕೆ ೬೦ ಅಂಕಗಳಿರುತ್ತವೆ.

loading...