ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

0
16
ನವದೆಹಲಿ- ಮಹಾರಾಷ್ಟ್ರ ಮತ್ತು ಉತ್ತರಪ್ರದೇಶದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಜನಜೀವನವನ್ನು ಬಾಧಿತಗೊಳ್ಳುವಂತೆ ಮಾಡಿರುವಾಗಲೇ ಇಂದು ಬಿಹಾರದಲ್ಲಿ ಭಾರಿ ಮಳೆ ಸುರಿಯಲಿದೆ ಎಂಬ ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬಿಹಾರದ ದರ್ಬಾಂಗ, ಸಮಷ್ಟಿಪುರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಪ್ರವಾಹ ಪರಿಸ್ಥಿತಿ ಉಂಟಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡುವಂತೆ ನೋಡಿಕೊಳ್ಳಬೇಕೆಂದು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯವರು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

loading...