ಒಂದೇ ಫ್ಲೈಟ್ ನಲ್ಲಿ ಪ್ರಯಾಣ ಬೆಳೆಸಿದ ರಾಜಾಹುಲಿ, ಹೌದ್ದೋ ಹುಲಿಯಾ..!

0
75

 

ಬೆಳಗಾವಿ

ರಾಜಕೀಯದಲ್ಲಿ ಹಾವು,‌ ಮುಂಗುಸಿಯಂತಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿನ ವರೆಗೆ ಒಂದೇ ವಿಮಾನದಲ್ಲಿ ಪ್ರಯಾಣ ಬೆಳೆಸಿದರು.

ಶನಿವಾರ ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ರಾಜಕಾರಣಿ ಸಭೆ ಮುಗಿಸಿಕೊಂಡು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಸಿಎಂ ಯಡಿಯೂರಪ್ಪ ಅವರೊಂದಿಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಮಹಾಲಿಂಗ ಪುರದಲ್ಲಿ ಬಿಜೆಪಿ ಶಾಸಕ ಸಿದ್ದು ಸವದಿ ವಿರುದ್ದ ಪ್ರತಿಭಟನೆ ನಡೆಸಿ ಬೆಳಗಾವಿ ಮೂಲಕವೇ ಬೆಂಗಳೂರುಗೆ ಹೊರಟಿದ್ದ ಸಿದ್ದರಾಮಯ್ಯ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ‌ ಭೇಟಿಯಾಗಿ ಬೆಂಗಳೂರಿಗೆ ಹಾಲಿ, ಮಾಜಿ ಸಿಎಂ ಪ್ರಯಾಣ ಬೆಳೆಸಿದರು.

loading...