ಕರ್ತವ್ಯಲೋಪ: ಪ್ರೌಢಶಾಲೆಯ ಶಿಕ್ಷಕಿ ಜ್ಯೋತಿ ಭಂಡಾರಿ ಅಮಾನತು

0
56

ಕರ್ತವ್ಯಲೋಪ: ಪ್ರೌಢಶಾಲೆಯ ಶಿಕ್ಷಕಿ ಜ್ಯೋತಿ ಭಂಡಾರಿ ಅಮಾನತು
ಬೆಳಗಾವಿ: ಇತ್ತೀಚೆಗೆ ತಾಲೂಕಿನ ಲಿಂಗನಮಠ ಗ್ರಾಮದ ಕೆವಿಜಿ ಬ್ಯಾಂಕಿನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸ್ ಅಧಿಕಾರಿಗಳಿಗೆ ಪ್ರಕರಣದ ತನಿಖೆಗೆ ಸಹಕಾರ ನೀಡಲಿಲ್ಲ ಎಂಬ ಕಾರಣಕ್ಕಾಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ ಭಂಡಾರಿ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಕಳೆದ ೧೦ ವರ್ಷಗಳಿಂದ ಲಿಂಗನಮಠ ಶಾಲೆಯಲ್ಲಿ ಮುಖ್ಯ ಶಿಕ್ಷಕಿ ಹುದ್ದೆಯಲ್ಲಿ ಸೇವೆಯಲ್ಲಿರುವ ಭಂಡಾರಿ ಅವರ ವಿರುದ್ಧ ಖಾನಾಪುರ ಸಿಪಿಐ ನಂದಗಡ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಜೊತೆಗೆ ಸ್ಥಳೀಯರಿಂದಲೂ ಇವರ ವಿರುದ್ಧ ಹಲವು ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಕರ್ತವ್ಯದಿಂದ ಅಮಾನತುಗೊಳಿಸಿರುವುದಾಗಿ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಡಿ.೫ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

loading...