ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ದ:ಪಕ್ಷ ಟಿಕೆಟ್ ನೀಡಿದರೆ ಎಂಪಿ ಚುನಾವಣೆಗೆ ಸ್ಪರ್ಧೆ:ವಿವೇಕರಾವ್ ಪಾಟೀಲ್

0
40

ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ದ:ಪಕ್ಷ ಟಿಕೆಟ್ ನೀಡಿದರೆ ಎಂಪಿ ಚುನಾವಣೆಗೆ ಸ್ಪರ್ಧೆ:ವಿವೇಕರಾವ್ ಪಾಟೀಲ್

ಕನ್ನಡಮ್ಮ ಸುದ್ದಿ-ಬೆಳಗಾವಿ: ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದರೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ದ ಎಂದು ವಿಧಾನ ಪರಿಷತ್ ಸದಸ್ಯ ವಿವೇಕರಾವ್ ಪಾಟೀಲ ಇಂದಿಲ್ಲಿ ಹೇಳಿದರು .

ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಲೋಕಸಭಾ ಟಿಕೆಟ್ ಸಂಬಂದ ಸಚಿವ ರಮೇಶ ಜಾರಕಿಹೋಳಿ ಮತ್ತು ಮಾಜಿ ಶಾಸಕ ಪೀರೋಜ್ ಸೇಠ ನಡುವೆ ನಡೆದ ವಾಗ್ವಾದ್ ಕುರಿತು ಪ್ರತಿಕ್ರಿಯೆ ನೀಡಿದ ಅವರು ಸೇಠ ಜೊತೆ ಉತ್ತಮ ಸಂಬಂದವಿದೆ ಅವರು ಯಾಕೆ ವಿರೋಧ ಮಾಡುತ್ತಿದ್ದಾರೆ ಗೊತ್ತಿಲ್ಲ.ಜಿಲ್ಲಾ ಕಾಂಗ್ರೆಸ್ ನಲ್ಲಿರು ಗೊಂದಲಗಳು ಶೀಘ್ರವೆ ಬಗೆಹರಿಯುತ್ತವೆ.ಬರುವ ಚುನಾವಣೆಯಲ್ಲಿ ಎಲ್ಲರೂ ಜೊತೆಗೂಡಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು .

loading...