ಕಾಲುವೆಗೆ ಜಾರಿದ ಕಾರು : ಒಂದೆ ಕುಟುಂಬದ ಐವರು ಜಲಸಮಾಧಿ

0
32

ಕಾಲುವೆಗೆ ಜಾರಿದ ಕಾರು : ಒಂದೆ ಕುಟುಂಬದ ಐವರು ಜಲಸಮಾಧಿ

ಕನ್ನಡಮ್ಮ ಸುದ್ದಿ-ಬೆಳಗಾವಿ: ರಸ್ತೆ ಮೇಲೆ ಹೋಗುತ್ತಿದ್ದ ಕಾರೊಂದು  ಚಾಲಕನ ನಿಯಂತ್ರಣ ತಪ್ಪಿ  ಕಾಲುವೆಗೆ ಉರುಳಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಜಲಸಮಾಧಿಯಾಗಿದ್ದಾರೆ.

ಸೋಮವಾರ ತಡರಾತ್ರಿ ಬೆಳಗಾವಿ ಜಿಲ್ಲೆಯ ಸವದತ್ತಿಯ ಕಡಬಿ ಗ್ರಾಮದ ಬಳಿ  ಘಟಪ್ರಭಾ ಎಡದಂಡೆ ನಾಲೆಗೆ ಕಾರು ಬಿದ್ದು ಈ ದುರ್ಘಟನೆ ನಡೆದಿದೆ.

ಮೃತರನ್ನು ಕಡಬಿ ಗ್ರಾಮದ ಪಕ್ಕೀರವ್ವ ಪೂಜೇರಿ(29), ಹನುಮಂತ ಪೂಜೇರಿ(60), ಲಗಮಣ್ಣ ಪೂಜೇರಿ(38), ಪಾರವ್ವ ಪೂಜೇರಿ(50), ಲಕ್ಷ್ಮೀ ಪೂಜೇರಿ(40) ಎಂದು ಗುರುತಿಸಲಾಗಿದೆ. ಕಾರು ಚಾಲಕ ಅಡಿವೇಪ್ಪ ಮಾಳಗಿ ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾನೆ.

ಮುರುಗೋಡ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...