ಕೇಂದ್ರದ ರೈತ ಪರ ಮಸೂದೆ ಅಂಗಿಕಾರದಲ್ಲಿ ವಿಪಕ್ಷಗಳು ರೈತರ ದಾರಿ ತಪ್ಪಿಸುತ್ತಿವೆ: ಜೀರಲಿ

0
8

ಬೆಳಗಾವಿ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ರೈತ ಪರ ಯೋಜನೆಯ ಮಸೂದೆಯನ್ನು ಅಂಗೀಕಾರ ಮಾಡಿದರೆ ವಿರೋಧ ಪಕ್ಷಗಳು ರೈತರ ದಿಕ್ಕು ತಪ್ಪಿಸುತ್ತಿವೆ ಎಂದು ಬಿಜೆಪಿ ಮುಖಂಡ‌ ಎಂ.ಬಿ.ಜೀರಲಿ ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ದೇಶದ ರೈತರ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಅದು ಭಾರತದ ಕೃಷಿ ಉತ್ಪನಕ್ಕಾಗಿ ಮಾರುಕಟ್ಟೆ ಸೃಷ್ಠಿಸುವುದೇ ಇರಬಹುದು ಅಥವಾ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವುದೇ ಇರುಬಹದು. ಕೊರೋನಾ ಬಿಕ್ಕಟ್ಟಿನ ವೇಳೆಯೂ ರೈತರ ಪರವಾಗಿ ಸರಕಾರ ವಿಶೇಷ ಕ್ರಮವನ್ನು ಕೈಗೊಂಡಿದೆ. ಅಲ್ಲದೆ ಗುರುವಾರ ಲೋಕಸಭೆ ಹಾಗೂ ಭಾನುವಾರ ರಾಜ್ಯಸಭೆಯಲ್ಲಿ ರೈತರ ಕುರಿತಾದ ಎರಡೂ ಮಸೂದೆಗೆ ಅನುಮೋದನೆ ದೊರಕಿರುವುದು ಸಂತಸ ತಂದಿದೆ ಎಂದರು.

ನೂತನ ಮಸೂದೆ ಅನ್ವಯ ರೈತರಿಗೆ ಹಾಗೂ ವ್ಯಾಪಾರಿಗಳಿಗೆ ತಮಗೆ ಇಷ್ಟ ಬಂದ ಕಡೆ ಕೃಷಿ ಉತ್ಪನ ಮಾರಾಟ ಮತ್ತು ಖರೀದಿ ಮಾಡುವ ಸ್ವಾತಂತ್ರ್ಯ ನೀಡಲಾಗಿದೆ. ಪರ್ಯಾಯ ವ್ಯಾಪಾರ ವ್ಯವಸ್ಥೆ ಮೂಲಕ ಬೆಳೆಗಳ ನ್ಯಾಯಯುತ ದರ ನಿಗದಿ ಪಡಿಸಲು ನೆರವು ನೀಡಲಾಗಿದೆ. ಕೃಷಿ ಉತ್ಪನ್ನಗಳ ಪಾರದರ್ಶಕ, ತಡೆರಹಿತ ಅಂತರ ರಾಜ್ಯ ಹಾಗೂ ರಾಜ್ಯದೊಳಗಿನ ವ್ಯಾಪಾರಕ್ಕೆ ಉತ್ತೇಜನ ನೀಡಲಾಗಿದೆ. ಉತ್ಪನದ ಆನ್ ಲೈನ್ ವ್ಯಾಪಾರಕ್ಕೆ ಒತ್ತು ನೀಡಲು ಕಾನೂನಾತ್ಮಕ ಚೌಕಟ್ಟನ್ನು ಅಳವಡಿಸಲಾಗಿದೆ ಎಂದು ಹೇಳಿದರು.

ಈ‌ ಮಸೂದೆಯ ಮೂಲಕ ಕೃಷಿ ಉದ್ಯಮ ಸಂಸ್ಥೆಗಳು, ಸಗಟು ವ್ಯಾಪಾರಿಗಳು, ರಫ್ತುದಾರರು, ಚಿಲ್ಲರೆ ವ್ಯಾಪಾರಿಗಳೊಂದಿಗೆ ವಹಿವಾಟು ನಡೆಸಲು ರೈತರಿಗೆ ಭದ್ರತೆ ಹಾಗೂ ಪ್ರೋತ್ಸಾಹ ನೀಡುವ ಕೃಷಿ ಒಪ್ಪಂದಗಳ ಕುರಿತು ರಾಷ್ಟ್ರೀಯ ಚೌಕಟ್ಟನ್ನು ನಿರ್ಮಿಸುವ ಗುರಿ ಹೊಂದಿದೆ ಎಂದರು.

ಎರಡು ಮಸೂದೆಗಳು ದೇಶದ ಕೃಷಿ ವಲಯದಲ್ಲಿ ಕ್ರಾಂತಿ ತರಲಿವೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ ಸ್ಪಷ್ಟಪಡಿಸಿದ್ದಾರೆ. ವಿವಿಧ ರಾಜ್ಯಗಳ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗಳ ಅನ್ವಯ ನೋಂದಣಿ ಮಾಡಿರುವ ಹೊರತಾಗಿ ರೈತರ ಉತ್ಪನ್ನಗಳನ್ನು ಮಾರಾಟ ಮಾಡುವ ಸೌಲಭ್ಯವನ್ನು ನೀಡಿರುವುದು ಹೆಮ್ಮೆಯ ಸಂಗತಿ ಎಂದರು.

ದೇಶದ ಶೆ.86 ರಷ್ಟು ಸಣ್ಣ ವರ್ಗದ ರೈತರಿದ್ದಾರೆ. ಒಮ್ಮೆ ಇವರಿಗೆ ಯಾವುದೇ ಕಾಯ್ದೆಯ ಮೂಲಕ ತಾವು ಬೆಳೆದ ಬೆಳೆಯ ನ್ಯಾಯಯುತ ದರದ ಬಗ್ಗೆ ಮುಂಚಿತವಾಗಿ ಮಾಹಿತಿ ದೊರೆಯರೆ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗಲಿದೆ ಇದು ಮಾರಕವಲ್ಲ ಎಂದು ಹೇಳಿದರು.

ಬೆಳಗಾವಿ ನಗರಾಧ್ಯಕ್ಷ ಶಶಿ ಪಾಟೀಲ, ಬಿಜೆಪಿ ಮುಖಂಡರಾದ ಮುರುಗೇಂದ್ರಗೌಡ ಪಾಟೀಲ, ರಾಜು‌ ಚಿಕ್ಕನಗೌಡರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

loading...