ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ದ ಕಹಳೆ‌ ಮೊಳಗಿಸಿದ ರೈತರು

0
19

 

ಬೆಳಗಾವಿ

ಕೇಂದ್ರ ಮತ್ತು ರಾಜ್ಯ ಸರಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೃಷಿ ಮಸೂದೆಯನ್ನು ಹೊರಡಿಸಿರುವುದನ್ನು ಖಂಡಿಸಿ ಬುಧವಾರ ಬೆಳಗಾವಿ, ಬಾಗಲಕೋಟ, ವಿಜಯಪುರ, ಧಾರವಾಡ ರೈತರು ನಗರದ ಚನ್ನಮ್ಮ ವೃತ್ತದಲ್ಲಿ ಕುಂಬಮೇಳ ಆಯೋಜಿಸುವ ಮೂಲಕ ಸಿಪಿಎಡ್ ಮೈದಾನದಲ್ಲಿ ಆಯೋಹಿಸಲಾಗಿರುವ ರೈತ ಸಮಾವೇಶದ ವರೆಗೂ ಪಾದಯಾತ್ರೆ ನಡೆಸಿದರು.

ರೈತರಿಗೆ ಮಾರಕವಾಗಿರುವ ಕೃಷಿ ಮಸೂದೆ ಹಾಗೂ ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರಕಾರದ ನಡೆಗೆ ರೈತ ನಾಯಕರು ವಿರೋಧ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ನಿರಂತರವಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಸೌಜನ್ಯಕ್ಕಾಗಿ ಕೇಂದ್ರ ಸರಕಾರ ರೈತರೊಂದಿಗೆ ಮಾತುಕತೆಯಾಡದೆ ರೈತರ ಮೇಲೆಯೇ ಲಾಠಿ ಚಾಜ್೯ ಮಾಡಿಸಿ ರೈತರ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದರು.

 

loading...