ಬೆಳಗಾವಿ
ಇತ್ತೀಚೆಗೆ ಕೇಂದ್ರ ಸಚಿವ ಸುರೇಶ ಅಂಗಡಿ ಅವರು ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದವರ ಮೇಲೆ ಕಂಡಲ್ಲಿ ಗುಂಡಕ್ಕಿ ಎಂದು ಹೇಳುತ್ತಾರೆ. ಗಡಿ ಹೆಸರಿನಲ್ಲಿ ಸಾರ್ವಜನಿಕರ ಆಸ್ತಿ ಪಾಸ್ತಿ ಹಾನಿ ಮಾಡಿದ ಎಂಇಎಸ್ ಗೆ ಗುಂಡಿಕ್ಕಿ ಎಂದು ಹೇಳಿಕೆ ನೀಡಲಿಲ್ಲ ಏಕೆ ಎಂದು ಕನಸೆ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ ಸವಾಲ್ ಹಾಕಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸರಕಾರ ದಿಟ್ಟ ಕ್ರಮ ಕೈಗೊಳ್ಳಬೇಕು. ಕಳೆದ 64 ವರ್ಷದಿಂದ ಮಹಾರಾಷ್ಟ್ರ ಏಕೀಕರಣ ಸಮಿತಿಯವರು ಬೆಳಗಾವಿಯಲ್ಲಿ ಎಂಇಎಸ್ ನವರು ಸಾಕಷ್ಟು ಆಸ್ತಿ ಹಾನಿ ಮಾಡಿದ್ದಾರೆ. ಅವರಿಗೆ ಕಂಡಲ್ಲಿ ಗುಂಡಿಕ್ಕಿ ಎಂದು ಯಾಕೆ ಹೇಳಲಿಲ್ಲ. ಎಲ್ಲಿಂದಲೋ ಬಂದವರಿಗೆ ಗುಂಡಿಕ್ಕಿ ಅಂದಾರೆ. ಗಡಿ ವಿಚಾರದಲ್ಲಿ ಕುತಂತ್ರ ಬುದ್ದಿಯ ಎಂಇಎಸ್ ಅವರಿಗೆ ಗುಂಡಿಕ್ಕಿ ಎನ್ನುವುದಿಲ್ಲ ಏಕೆ ಎಂದು ಕೇಂದ್ರ ಸಚಿವ ಸುರೇಶ ಅಂಗಡಿಗೆ ಸವಾಲ್ ಹಾಕಿದರು.
ಬೆಳಗಾವಿ ಗಡಿ ವಿವಾವದದ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ದವ ಠಾಕ್ರೆ ಪಿಒಕೆಗೆ ಹೋಲಿಸಿದ್ದು ಖಂಡನೀಯ. ಮಹಾರಾಷ್ಟ್ರ ಸಿಎಂಗೆ ತಿಳುವಳಿಕೆ ಇಲ್ಲ. ಪಾಕಿಸ್ತಾನ ಹಾಗೂ ಕಾಶ್ಮೀರ ಗಡಿವಿವಾದಕ್ಕೆ ಬೆಳಗಾವಿ ಮಹಾರಾಷ್ಟ್ರಕ್ಕೆ ಹೋಲಿಸುವ ಅವರಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.
ಕರ್ನಾಟಕದ ಸಿಎಂ ಹಾಗೂ ಸರಕಾರ ಮಹಾಸಿಎಂ ಗೆ ದಿಟ್ಟ ಉತ್ತರ ನೀಡದಿರುವುದು ದುರ್ದೈವದ ಸಂಗತಿ. ರಾಮಕೃಷ್ಣ ಹೆಗಡೆ ಬಿಟ್ಟರೆ ಗಡಿ ವಿಚಾರವಾಗಿ ಯಾವುದೇ ಸರಕಾರ ಮುಂದಾಗದೆ ಇರುವುದು ವಿಪರ್ಯಾಸದ ಸಂಗತಿ ಎಂದರು.
ಮಹಾರಾಷ್ಟ್ರದ ಸರಕಾರ ಗಡಿವಿಚಾರವಾಗಿ ಒಗ್ಗಟ್ಟಾಗುತ್ತಾರೆ. ಆದರೆ ಕರ್ನಾಟಕದ ಬೆಳಗಾವಿ ಜನಪ್ರತಿನಿದಿಗಳು ಎಂಇಎಸ್ ನ ಮತ ಬ್ಯಾಂಕ್ ಗಾಗಿ ಬಳಸಿಕೊಳ್ಳುತ್ತಿರುವುದು ನಾಚಿಗೆಗೇಡಿನ ಸಂಗತಿ ಎಂದರು.
ಗಡಿ ಬಗ್ಗೆ ಕಳಕಳಿ ಇರುವ ಜನರನ್ನು ಬೆಳಗಾವಿಗಡಿ ಉಸ್ತುವಾರಿ ಸಚಿವರ ನೇಮಕ ಮಾಡಬೇಕು. ಬೆಂಗಳೂರಿನಲ್ಲಿ ಇರುವ ಗಡಿ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಬೆಳಗಾವಿಗೆ ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿದರು.
ಮಹಾ ಸಿಎಂ ಉದ್ಬವ ಠಾಕ್ರೆ ಕನ್ನಡ ಮತ್ತು ಮರಾಠಿಗರ ಭಾಷೆಯಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರ ತಂದೆಗೆ ತಕ್ಕ ಪಾಠ ಕಲಿಸಿದವರು ಕನ್ನಡಿಗರು ಉದ್ದವಗೆ ಬಿಡುತ್ತೇವಾ ಎಂದು ಖಡಕ ಎಚ್ಚರಿಕೆ ನೀಡಿದರು.
ಮಹದಾಯಿ ಹೋರಾಟ ನಿರಂತರವಾಗಿ ನಾಲ್ಕು ವರ್ಷದಿಂದ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇದೆ. ಮಹದಾಯಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ.
ಮಹದಾಯಿ ಯೋಜನೆಯನ್ನು ಒಂದು ವಾರದಲ್ಲಿ ಅನುಷ್ಠಾನಗೊಳ್ಳಿಸದಿದ್ದರೆ ಎಲ್ಲಾ ಲೋಕಸಭಾ ಸದಸ್ಯರ ಮನೆಯ ನಲ್ಲಿಯನ್ನು ಕಡಿತ ಮಾಡಲಾಗುವುದು ಎಂದರು.
ಕನಸೆ ಜಿಲ್ಲಾಧ್ಯಕ್ಷ ಬಾಬು ಸಂಗೋಡಿ, ಆನಂದ ಆಡ್ಡೆ, ಸುಷ್ಮಾ ಯಾದವಾಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.