ಕೈಗಾರಿಕಾ ಸಂಘದ ಅಧ್ಯಕ್ಷನ ಹೇಳಿಕೆಗೆ ಬೆಳಗಾವಿ ಜನತೆಯ ಆಕ್ರೋಶ

0
58


ಬೆಳಗಾವಿ
ರಾಜ್ಯದಲ್ಲಿ ಬೆಂಗಳೂರು ಬಿಟ್ಟರೆ ಸರಕಾರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿಸುತ್ತಿರುವ ಬೆಳಗಾವಿ ಜಿಲ್ಲೆಯ ಕೈಗಾರಿಕೆಗಳ ಅಭಿವೃದ್ದಿ ಹಾಗೂ ಬೆಳವಣಿಗೆಗೆ ಬೆಳಗಾವಿ ಜನತೆ ಶ್ರಮ ಪಡುತ್ತಿದೆ. ಪ್ರಾದೇಶಿಕ ಕೇಂದ್ರ ಬೆಳಗಾವಿಯನ್ನು ಕಡೆಗಣಿಸಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹುಬ್ಬಳ್ಳಿಯಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶ ಹಮ್ಮಿಕೊಂಡಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಿ ಪಡಿಸಿ ಬಹಿಷ್ಕರಿಸುವಂತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ ಬೆಳಗಾವಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಶ್ರೀಧರ ಉಪ್ಪಿನ ಹೇಳಿಕೆಗೆ ಬೆಳಗಾವಿ ಜನತೆ ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.
ಬೆಳಗಾವಿ ಕೈಗಾರಿಕೆಗಳ ಹಿತ ಕಾಯಬೇಕಿದ್ದ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಶ್ರೀಧರ ಉಪ್ಪಿನ ಹುಬ್ಬಳ್ಳಿಯಲ್ಲಿ ನಡೆಯುವ ಬಂಡವಾಳ ಹೂಡಿಕೆಯ ಸಮಾವೇಶ ಬಹಿಷ್ಕರಿಸುವಂತೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ವಿರೋಧಿಸುತ್ತಿದ್ದಾರೆ. ಇದು ಸರಕಾರದ ಕಾರ್ಯಕ್ರಮವಾಗಿರುವುದರಿಂದ ಬೆಳಗಾವಿ ಉದ್ಯಮಿಗಳು ಭಾಗವಹಿಸಬಹುದು ಎಂದು ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ಹುಬ್ಬಳ್ಳಿ-ಧಾರವಾಡದ ಜತೆಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಹೊಣೆ ಹೊತ್ತಿರುವ ಜಗದೀಶ ಶೆಟ್ಟರ ಅವರು ಹುಬ್ಬಳ್ಳಿಯಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸುತ್ತಿರುವುದಕ್ಕೆ ವಿವಿಧ ಮಠಾಧೀಶರು, ಕನ್ನಡ ಸಂಘಟನೆಯ ಮುಖಂಡರು ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹುಬ್ಬಳ್ಳಿಯಲ್ಲಿ ನಡೆಯುವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಬೆಳಗಾವಿ ಉದ್ಯಮಿಗಳು ಬಹಿಷ್ಕಾರ ಹಾಕುವಂತೆ ಆಗ್ರಹಿಸಿದರು. ಕೈಗಾರಿಕಾ ಅಭಿವೃದ್ದಿಯ ಹಿತ ಕಾಯಬೇಕಿದ್ದ ಉಪ್ಪಿನ ಬೇಜವಾಬ್ದಾರಿ ಹೇಳಿಕೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಳಗಾವಿ ಕೈಗಾರಿಕಾ ಹಿತಕಾಯದ ಇಂಥ ಅಧ್ಯಕ್ಷನನ್ನು ವಜಾ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ.

loading...