ಕೊಡಗು ಜಿಲ್ಲೆಯಲ್ಲಿ ಇನ್ನೆರಡು ದಿನ ಭಾರೀ ಮಳೆಯ ಮುನ್ಸೂಚನೆ

0
6

ಮಡಿಕೇರಿ- ಕೊಡಗು ಜಿಲ್ಲೆಯಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು, ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡಬಾರದು ಎಂದು ಜಿಲ್ಲಾಧಿಕಾರಿ ಅನ್ನೀಸ್ ಕಣ್ಮನಿ ಜಾಯ್ ಹೇಳಿಕೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ರಸ್ತೆಗಳನ್ನು ನಿರ್ಬಂಧಿಸಿರುವ ಸ್ಥಳಗಳಲ್ಲಿ ಪ್ರವಾಸಿಗರು ಅತಿರೇಕಗಳಿಗೆ ಕೈಹಾಕಬಾರದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ, ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಗಳ ಬಗ್ಗೆಯೂ ಅವರು ಮುನ್ಸೂಚನೆ ನೀಡಿದ್ದಾರೆ.

loading...