ಕೊರೊನಾ ಸೋಂಕಿಗೆ ಚೀನಾದಲ್ಲಿ ಮತ್ತೆ 71 ಬಲಿ

0
7
ಬೀಜಿಂಗ್- ಚೀನಾದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕಿಗೆ ಮತ್ತೆ 71 ಜನರು ಬಲಿಯಾಗಿದ್ದು ಕಳೆದ 24 ಗಂಟೆಗಳಲ್ಲಿ 508 ಹೊಸ ದೃಢಪಟ್ಟ ಪ್ರಕರಣಗಳು ದಾಖಲಾಗಿವೆ ಎಂದು ಚೀನಾ ಆರೋಗ್ಯ ಪ್ರಾಧಿಕಾರ ಮಂಗಳವಾರ ತಿಳಿಸಿದೆ.
ಸೋಂಕಿಗೆ ಬಲಿಯಾದವರ ಸಂಖ್ಯೆ ಕಳೆದೊಂದು ದಿನದಲ್ಲಿ ಹುಬೈ ಪ್ರಾಂತ್ಯದಲ್ಲಿ 68 ರಷ್ಟಿದ್ದು ಶಾಂಗ್ದಾಂಗ್ ಮತ್ತು ಗ್ವಾಂಗ್ದಾಂಗ್ ತಲಾ ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಪ್ರಾಧಿಕಾರ ತಿಳಿಸಿದೆ.
ಡಿಸೆಂಬರ್ ಅಂತ್ಯದ ವೇಳೆಗೆ ಕೊರೊನಾ ವೈರಾಣು ಸೋಂಕು ಮೊದಲ ಬಾರಿಗೆ ಚೀನಾದ ವುಹಾನ್ ನಲ್ಲಿ ಕಾಣಿಸಿಕೊಂಡಿತು. ಇದೀಗ 20 ಕ್ಕೂ ಹೆಚ್ಚು ದೇಶಗಳಿಗೆ ಹರಡಿದೆ. ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯು ಎಚ್ ಒ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ.
loading...