ಕೋವಿಡ್-19 ಮಾರ್ಗಸೂಚಿ ಪ್ರಕಾರ ಗಡಿಯಲ್ಲಿ ಚಕ್‌ಪೋಸ್ಟ್ ನಿರ್ಮಾಣ: ಎಸ್ಪಿ ನಿಂಬರಗಿ

0
6

ಬೆಳಗಾವಿ
ಕೋವಿಡ್ -19 ಮಾರ್ಗಸೂಚಿ ಪ್ರಕಾರ ಮಹಾರಾಷ್ಟ್ರದಿಂದ ಬರುವ ವಾಹನಗಳನ್ನು ಗಡಿ ಭಾಗದಲ್ಲಿ ಚಕ್ ಪೋಸ್ಟ್ ನಿರ್ಮಾಣ ಮಾಡಿ ತಪಾಸಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದರು. ಖಾಸಗಿ ವಾಹನದಲ್ಲಿ ಬರುವ ಪ್ರಯಾಣಿಕರು ಕರ್ನಾಟಕಕ್ಕೆ ಬರುವಾಗ ಆರ್ ಟಿಪಿಸಿ ಆರ್ ತಪಾಸಣೆಯ ವರದಿ ಕಡ್ಡಾಯವಾಗಿದೆ. ಈ ಕುರಿತು ಕೊಲ್ಲಾಪುರ, ಸೊಲ್ಲಾಪುರ ಪೊಲೀಸ್ ಸಿಬ್ಬಂದಿಗಳೊAದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, ಮಹಾರಾಷ್ಟ್ರದಿಂದ ಬರುವ ಜನರು ಸಹಕರಿಸಬೇಕೆಂದು ಹೇಳಿದರು.
ಆರೋಗ್ಯ ಇಲಾಖೆಯಲ್ಲಿ ಸಹಕಾರದಿಂದ ಗಡಿ ಭಾಗದ ಚಕ್ ಪೋಸ್ಟ್ ಗಳಲ್ಲಿ ಪೊಲೀಸ್ ಸಿಬ್ಬಂದಿಗಳ ತಂಡ ಕಾರ್ಯನಿರ್ವಹಿಸಲಿದ್ದಾರೆ. ಹೊರ ರಾಜ್ಯದಿಂದ ಬರುವ ಜನರು ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು.

loading...